Breaking News

ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ


ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಇನ್ನೂ ಹಲವು ದಿನ ವರ್ಷಧಾರೆ ಸುರಿಯಲಿದೆ. ಗುರುವಾರ ಬೆಳ್ಳಂಬೆಳಗ್ಗೆ ಮಳೆ ಸಿಂಚನ ಆರಂಭವಾಗಿದ್ದು, ಶಾಲಾ ಕಾಲೇಜುಗಳಿಗೆ ತೆರಳುವ ಮಕ್ಕಳಿಗೆ, ಆಫೀಸಿಗೆ ತೆರಳುವವರಿಗೆ ತೊಂದರೆಯಾಗಿದೆ.

ಬೆಂಗಳೂರು, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರಿ, ಚಾಮರಾಜನಗರ, ಕೊಡಗು ಮತ್ತು ಕೋಲಾರ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನವೆಂಬರ್ 5ರವರೆಗೆ ಈ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಇನ್ನು ಹಲವು ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಈಶಾನ್ಯ ಮಾನ್ಸೂನ್ ಮಾರುತಗಳಿಂದಾಗಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ.ಪುದುಚೆರಿ ಹಾಗೂ ತಮಿಳುನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *