ಬೆಂಗಳೂರು : ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಕಾಮಾಕ್ಷಿಪಾಳ್ಯದ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.
ಮೃತನ ಗುರುತು ಪತ್ತೆಯಾಗಿಲ್ಲವಾದ್ರೂ ಮುಂದೆ ಹೋಗುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ.ಕೂಡಲೇ ಯುವಕ ನೆಲಕ್ಕೆ ಬಿದ್ದಿದ್ದು, ತಲೆಗೆ ಗಂಭೀರವಾದ ಗಾಯವಾಗಿದ್ದು, ತೀವ್ರ ರಸ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಅಪಘಾತಕ್ಕೆ ಕಾರಣವಾದ ಬಸ್ ಚಾಲಕನಿಗೆ ಥಳಿಸಿದ್ದಾರೆ.ಮಾಹಿತಿ ತಿಳಿದ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

