ಹುಬ್ಬಳ್ಳಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಸ್ಸಿನ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಪ್ರಯಾಣಿಕರೊಬ್ಬರು ಬಸ್ಸಿನಿಂದ ಹೊರಬಿದ್ದು ಕಾಲು ಮುರಿದ ಘಟನೆ ಇಲ್ಲಿನ ವಿದ್ಯಾನಗರದಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಹೌದು, ಧಾರವಾಡದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬೇದರೆ ಸಾರಿಗೆ ಬಸ್ಸಿನಲ್ಲಿಯೇ ಘಟನೆ ನಡೆದಿದೆ. ಬಸ್ಸು ವಿದ್ಯಾನಗರದ ಬಿ.ವ್ಹಿ.ಬಿ ಬಸ್ ನಿಲ್ದಾಣದ ಬಳಿ ಬರುತ್ತಿದ್ದ ವೇಳೆಯಲ್ಲಿಯೇ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾರೆ. ಪರಿಣಾಮ ಪ್ರಯಾಣಿಕ ನಿಯಂತ್ರಣ ತಪ್ಪಿ ಬಸ್ಸಿನ ಹೊರಗಡೆ ಬಿದ್ದಿದ್ದಾನೆ. ಪರಿಣಾಮ ಪ್ರಯಾಣಿಕನ ಗಾಯಗಳಾಗಿದ್ದು, ಗಾಯಾಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

