Breaking News

ಒಂದೇ ಕುಟುಂಬದ 3 ಮಹಿಳೆಯರು ಆತ್ಮಹತ್ಯೆಗೆ‌ ಶರಣು


ಚಿತ್ರದುರ್ಗ :  ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಮಹಿಳೆಯರು ನೀರಿನಲ್ಲಿ ವಿಷ ಬೆರೆಸಿಕೊಂಡು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ದಲಿತ ಕಾಲೋನಿಯ ಮಂಗೇರ ತಿಪ್ಪಮ್ಮ (70), ಮಕ್ಕಳಾದ ಮಾರಕ್ಕ (55) ಹಾಗೂ ದ್ಯಾಮಕ್ಕ (35) ಎಂದು ಗುರುತಿಸಲಾಗಿದೆ.

ತಿಪ್ಪಮ್ಮನ ಗಂಡ ಕೆಂಚಪ್ಪ ಒಂದು ವರ್ಷದ ಹಿಂದೆ ಮೃತಪಟ್ಟಿದ್ದರು. ತಿಂಗಳ ಹಿಂದೆ ಮಗ ದ್ಯಾಮಣ್ಣ ಮೃತಪಟ್ಟಿದ್ದರಿಂದ ಮನೆಯ ನಿರ್ವಹಣೆ ಕಷ್ಟವಾಗಿತ್ತು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *