Breaking News

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಪ್ರಾರಂಭ


ಬೆಂಗಳೂರು : ರಾಜ್ಯದಲ್ಲಿ ಮತ್ತೆ ವರುಣನ ಕೃಪೆ ಮುಂದುವರೆದಿದೆ. ಈ ಬಾರಿ ಹಿಂಗಾರು ಮಳೆ ಸ್ವಲ್ಪ ಬಿರುಸಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಜಿಟಿಜಿಟಿ ಮಳೆ ಶುರುವಾಗಿದೆ.

ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮುಂದಿನ 24 ಗಂಟೆಯಲ್ಲಿ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆ ಹಾಗೂ ಕೆಲವು ಭಾಗಗಳಲ್ಲಿ ಅಧಿಕ ಮಳೆಯಾಗುವ ಸಾದ್ಯತೆ ಇದೆ. ಕರಾವಳಿ ಜಿಲ್ಲೆಗಳ ಕೆಲವೊಂದು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ನವಂಬರ್‌ 5ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *