Breaking News

ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣ : ತಪ್ಪೊಪ್ಪಿಕೊಂಡ
ಕಣ್ಣೂರು ಮಠದ ಶ್ರೀಗಳು


ಬೆಂಗಳೂರು: ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಣ್ಣೂರು ಮಠದ ಶ್ರೀಗಳು ತಪ್ಪೊಪ್ಪಿಕೊಂಡಿದ್ದಾರೆ.

ಮಾಗಡಿ ಪೊಲೀಸರು ಆರೋಪಿ ಕಣ್ಣೂರು ಮಠದ ಡಾ.ಮೃತ್ಯುಂಜಯಶ್ರೀಗಳನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಈ ವೇಳೆ ಬಸವಲಿಂಗಶ್ರೀಗಳ ವಿಡಿಯೋ ರೆಕಾರ್ಡ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ ಡಾ.ಮೃತ್ಯುಂಜಯ ಸ್ವಾಮೀಜಿಯನ್ನು ಕಣ್ಣೂರು ಮಠಕ್ಕೆ ಕರೆದೊಯ್ದಿರುವ ಮಾಗಡಿ ಪೊಲೀಸರು ಕಣ್ಣೂರು ಮಠದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.

ಈ ನಡುವೆ ಬಂಧಿತ ಎಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ ವಿಚಾರಣೆ ನಡೆಸಲಾಗುತ್ತಿದ್ದು, ಆಕೆ ಮೊಬೈಲ್ ಪರಿಶೀಲನೆ ನಡೆಸಿದಾಗ ನೀಲಾಂಬಿಕೆಗೆ ಮೊಬೈಲ್ ಬಗ್ಗೆ ಅಪಾರ ಜ್ಞಾನವಿರುವುದು ಗೊತ್ತಾಗಿದೆ. ಅಲ್ಲದೇ 6 ತಿಂಗಳ ಮೊಬೈಲ್ ಡೇಟಾವನ್ನು ಸಂಪೂರ್ಣವಾಗಿ ಡಿಲಿಟ್ ಮಾಡಿರುವ ನೀಲಾಂಬಿಕೆ ಕೆಲ ತಿಂಗಳಿಂದ ಮೊಬೈಲ್ ಉಪಯೋಗಿಸುತ್ತಿರುವುದರ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *