Breaking News

ಇಸ್ರೇಲ್‌ ನ ಪ್ರಧಾನ ಮಂತ್ರಿಯಾಗಿ ಬೆಂಜಮಿನ್ ನೆತನ್ಯಾಹು ಮತ್ತೆ ಆಯ್ಕೆ


ಇಸ್ರೇಲ್‌: ಇಲ್ಲಿಯ ಪ್ರಧಾನ ಮಂತ್ರಿಯಾಗಿ ಬೆಂಜಮಿನ್ ನೆತನ್ಯಾಹು ಮತ್ತೆ ಆಯ್ಕೆಯಾಗಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಯೇರ್ ಲ್ಯಾಪಿಡ್ ಅವರನ್ನು ಬೆಂಜಮಿನ್ ನೆತನ್ಯಾಹು ಸೋಲಿಸುವ ಮೂಲಕ ಮತ್ತೆ ಇಸ್ರೇಲ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ಈ ವೇಳೆ, ಸೋಲನ್ನು ಒಪ್ಪಿಕೊಂಡಿರುವ ಜೈರ್ ಲ್ಯಾಪಿಡ್ ಅವರು ಬೆಂಜಮಿನ್ ನೆತನ್ಯಾಹು ಅವರನ್ನು ಅಭಿನಂದಿಸಿದ್ದಾರೆ. ವ್ಯವಸ್ಥಿತವಾಗಿ ಅಧಿಕಾರ ಹಸ್ತಾಂತರಕ್ಕೆ ಸಿದ್ಧತೆ ನಡೆಸುವಂತೆ ಲ್ಯಾಪಿಡ್ ಎಲ್ಲ ಇಲಾಖೆಗಳಿಗೂ ಸೂಚಿಸಿದ್ದಾರೆ.

ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಚಲಾವಣೆಯಾಗಿದ್ದ ಮತಗಳ ಮತಗಳ ಎಣಿಕೆ ಕಾರ್ಯ ನಿನ್ನೆ ಮುಕ್ತಾಯಗೊಂಡಿದ್ದು, 120 ಸದಸ್ಯ ಬಲದ ಸಂಸತ್ತಿನಲ್ಲಿ ನೆತನ್ಯಾಹು ನೇತೃತ್ವದ ಬಲಪಂಥೀಯ ಬಣ 64 ಸ್ಥಾನಗಳನ್ನು ಗೆದ್ದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕ್ರಮಬದ್ಧವಾಗಿ ಅಧಿಕಾರ ಹಸ್ತಾಂತರಕ್ಕೆ ಸಿದ್ಧತೆ ನಡೆಸುವಂತೆ ಪ್ರಧಾನಿ ಕಾರ್ಯಾಲಯದ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಿರುವುದಾಗಿ ಲ್ಯಾಪಿಡ್ ನೆತನ್ಯಾಹುಗೆ ತಿಳಿಸಿದ್ದಾರೆ. ನೆತನ್ಯಾಹು ಅವರ ಗೆಲುವಿಗೆ ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *