ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಸುಳ್ಳ ರಸ್ತೆಯಲ್ಲಿನ ಅಂಗಡಿಯಲ್ಲಿ ಇಟ್ಟಿದ್ದ 6 ಲಕ್ಷ ರೂಪಾಯಿ ಕಳವು ಮಾಡಿದ್ದ ಆರೋಪಿಯನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ 4.21 ಲಕ್ಷ ರೂಪಾಯಿ ನಗದು, ಮೊಟಾರ್ ಸೈಕಲ್, ಮೊಬೈಲ್ ಹಾಗೂ ಬೆಳ್ಳಿ ಆಭರಣ ವಶಪಡಿಸಿಕೊಂಡಿದ್ದಾರೆ. ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಹಣ ಕಳವು ಮಾಡಿ ಪರಾರಿಯಾಗಿದ್ದ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಕೇಶ್ವಾಪುರ ಠಾಣೆ ಪೊಲೀಸರು ಇನ್ಸ್‌ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

