Breaking News

ಹಾವೇರಿ ತಹಶೀಲ್ದಾರ್ ಗಿರೀಶ್ ಸ್ವಾದಿ ಕಾಣೆ : ದೂರು ದಾಖಲು

ಹಾವೇರಿ: ತಹಶೀಲ್ದಾರ್ ಗಿರೀಶ್ ಸ್ವಾದಿ ಅವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಿರೀಶ್ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅನುಮಾನಕ್ಕೆ ಕಾರಣವಾಗಿದೆ.

ಅ. 31 ರಂದು ರಾತ್ರಿ 9:30ಕ್ಕೆ ಗಿರೀಶ್ ಪತ್ನಿ ಭಾಗ್ಯಶ್ರೀ ಅವರಿಗೆ ಕೊನೆಯ ಬಾರಿ ಕರೆ ಮಾಡಿದ್ದಾರೆ. ಪರಿಚಯಸ್ಥರಾದ ಬೆಳಗಾವಿಯ ಜಹೂರ ಅಂಗಡಿ ಅವರ ಮೊಬೈಲ್ ನಿಂದ ಕರೆ ಮಾಡಿದ್ದ ಗಿರೀಶ್ ರಾತ್ರಿ ಮನೆಗೆ ಬರುವುದಿಲ್ಲ.

ನ. 1 ರ ಕನ್ನಡ ರಾಜ್ಯೋತ್ಸವ ಇರುವುದರಿಂದ ಹಾವೇರಿ ಪ್ರವಾಸಿ ಮಂದಿರದಲ್ಲಿ, ಇಲ್ಲವೇ ಹಾನಗಲ್ ಖಾಸಗಿ ರೆಸಿಡೆನ್ಸಿಯಲ್ಲಿ ಉಳಿದುಕೊಳ್ಳುತ್ತೇನೆ ಎಂದು ಹೇಳಿದ್ದರು ಎನ್ನಲಾಗಿದೆ. ವಾಹನ ಚಾಲಕ ನ. 1 ರಂದು ಬೆಳಿಗ್ಗೆ 6 ಗಂಟೆಗೆ ಸಿದ್ದೇಶ್ವರ ನಗರದಲ್ಲಿರುವ ತಹಶೀಲ್ದಾರ್ ಮನೆಗೆ ಬಂದು ವಿಚಾರಿಸಿದಾಗ ರಾತ್ರಿ ಮನೆಗೆ ಬಂದಿಲ್ಲ ಎಂದು ಪತ್ನಿ ತಿಳಿಸಿದ್ದಾರೆ. ನಂತರ ಕುಟುಂಬದವರು ಮತ್ತು ಕಚೇರಿ ಸಿಬ್ಬಂದಿ ವಿಚಾರಿಸಿದಾಗ ನ. 1 ರ ಬೆಳಗಿನ ಜಾವ 5 ಗಂಟೆಗೆ 112ನೇ ರೂಂ ಖಾಲಿ ಮಾಡಿ ಹೋಗಿರುವುದಾಗಿ ಖಾಸಗಿ ರೆಸಿಡೆನ್ಸಿ ಬಂದಿ ತಿಳಿಸಿದ್ದಾರೆ ಎನ್ನಲಾಗಿದೆ.

ತಹಶೀಲ್ದಾರ್ ಗಿರೀಶ್ ಅನಾರೋಗ್ಯದ ಕಾರಣ ನ. 3 ರಿಂದ ಒಂದು ತಿಂಗಳು ರಜೆ ಹಾಕಿದ್ದು, ಬ್ಯಾಡಗಿ ತಹಶೀಲ್ದಾರ್ ಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ರಘುನಂದನಮೂರ್ತಿ ತಿಳಿಸಿದ್ದಾರೆ. ತಹಶೀಲ್ದಾರ್ ಗಿರೀಶ್ 3 ದಿನದಿಂದ ನಾಪತ್ತೆಯಾಗಿ ಮೊಬೈಲ್ ಸ್ವಿಚ್ ಆಫ್ ಆಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ ಪೊಲೀಸರಿಗೆ ದೂರು ನೀಡಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *