Breaking News


ಕೆಎಸ್‌ಆರ್ ಟಿಸಿ ಬಸ್ ಪಲ್ಟಿ : 13 ಮಂದಿ ಪ್ರಯಾಣಿಕರಿಗೆ ಗಾಯಾ


ಚಾಮರಾಜನಗರ: ಹೊರವಲಯದ ನಂಜನಗೂಡು ರಸ್ತೆಯಲ್ಲಿ ಕೆಎಸ್‌ಆರ್ ಟಿಸಿ ಬಸ್ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.

ಮೈಸೂರಿಂದ ಕೊಯಮತ್ತೂರಿಗೆ ತೆರಳುತ್ತಿದ್ದ ಬಸ್ ನಿನ್ನೆ ಮಧ್ಯರಾತ್ರಿ‌ 2 ಗಂಟೆ ಸುಮಾರಿಗೆ ಹೊರವಲಯದಲ್ಲಿರುವ ಸಣ್ಣ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಕಂಡಕ್ಟರ್ ಸೇರಿದಂತೆ 13 ಮಂದಿ ಪ್ರಯಾಣಿಕರು ಗಾಯಾಕೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಚಾಮರಾಜನಗರ ಪಟ್ಟಣ ಠಾಣೆಯ ಕ್ಷಿಪ್ರ ಕಾರ್ಯ(QRT) ಪಡೆ ಹಾಗೂ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಗಾಯಗೊಂಡವರನ್ನು ಸ್ಸಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ‌.ಈ ಅಪಘಾತ ಚಾಮರಾಜನಗರ ಪಟ್ಟಣ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು,ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *