Breaking News

ಆತನ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಮೂಡುತ್ತಿವೆ : ಶಾಸಕ ರೇಣುಕಾಚಾರ್ಯ


ದಾವಣಗೆರೆ: ಸಹೋದರನ ಮಗ ಚಂದ್ರಶೇಖರ್ ಸಾವು ಅಪಘಾತವಲ್ಲ, ಇದೊಂದು ಕೊಲೆ. ಹಿಂದುತ್ವದ ಬಗ್ಗೆ ತುಂಬಾ ಅಭಿಮಾನ ವನ್ನು ಹೊಂದಿದ್ದ ಆತನನ್ನು ಹೊಡೆದು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ ಕಣ್ಣಿರಿಟ್ಟಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಚಂದ್ರಶೇಖರ್ ಹಿಂದುತ್ವಕ್ಕಾಗಿ ಹೋರಾಟ ನಡೆಸುತ್ತಿದ್ದ. ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ಗಲಾಟೆ ಆದಾಗಲೇ ನಾನು ಎಚ್ಚೆತ್ತುಕೊಳ್ಳಬೇಕಿತ್ತು ಎಂದರು.

ಚಂದ್ರಶೇಖರ್ ಮನೆಗೆ ಬರದೆ ಎರಡು ದಿನವಾದಾಗಲೆ ನಾವು ನಾಪತ್ತೆ ಕೇಸ್ ದಾಖಲಿಸಿದ್ದೆವು. ಈಗ ಆತನ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಮೂಡುತ್ತಿವೆ. ಆತನ ತಲೆಗೆ ಬಲವಾಗಿ ಹೊಡೆಯಲಾಗಿದೆ. ಕೈಕಾಲು ಕಟ್ಟಿಹಾಕಿದ ಸ್ಥಿತಿಯಲ್ಲಿ ಕಾರಿನ ಹಿಂಬದಿ ಸೀಟ್ ನಲ್ಲಿ ಮೃತದೇಹ ಪತ್ತೆಯಾಗಿದೆ. ಕಿವಿಗಳ ಮೇಲೂ ಹಲ್ಲೆ ನಡೆಸಲಾಗಿದೆ. ಅನುಮಾನಾಸ್ಪದ ಸಾವು ಎಂದು ದೂರು ನೀಡಿದ್ದೇವೆ ಎಂದು ಹೇಳಿದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *