Breaking News

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ಕುರಿತು ವರದಿ ಬಂದ ನಂತರ ನಿರ್ಧರಿಸಲಾಗುವುದು : ಸಿಎಂ


ಚಿತ್ರದುರ್ಗ: ”ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಅರ್ಜಿ ಸಲ್ಲಿಕೆಯಾಗಿವೆ. ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದು, ವರದಿ ಬಂದ ನಂತರ ನಿರ್ಧರಿಸಲಾಗುವುದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಜಿಲ್ಲೆಯ ಸಾಣೇಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಆಡಳಿತಾಧಿಕಾರಿ ನೇಮಿಸುವ ಪೂರ್ವ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯಬೇಕಿದೆ. ಈ ಸಂಬಂಧ ಕಂದಾಯ ಇಲಾಖೆಯಿಂದ ವರದಿ ಸಲ್ಲಿಕೆಯಾದ ಬಳಿಕೆ ನೇಮಕ ಕುರಿತು ತೀರ್ಮಾನಿಸಲಾಗುವುದು” ಎಂದರು.

ಮುರುಘಾ ಮಠದ ಸ್ವಾಮೀಜಿಯವರ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ. ಆ ಬಗ್ಗೆ ನ್ಯಾಯಾಲಯ ನಿರ್ಧಾರ ಮಾಡುತ್ತದೆ ಎಂದು ಕೆಲವು ಪ್ರಶ್ನೆಗಳಿಗೆ ಬೊಮ್ಮಾಯಿ ಉತ್ತರಿಸಿದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *