Breaking News

ಸಬ್‌ ಕಾ ಸಾತ್‌ ಸಬ್‌ ಕಾ ವಿಕಾಸ್‌’ ಅಡಿ ಹಲವು ಅಭಿವೃದ್ಧಿ ಕಾರ್ಯಕ್ರಮ : ಬಸವರಾಜ ಬೊಮ್ಮಾಯಿ


ಬ್ಯಾಡಗಿ (ಹಾವೇರಿ): ‘ಸಬ್‌ ಕಾ ಸಾತ್‌ ಸಬ್‌ ಕಾ ವಿಕಾಸ್‌’ ಎನ್ನುವ ತತ್ವದಡಿ ಎಲ್ಲ ಸಮುದಾಯಗಳ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಜನ ಸಂಕಲ್ಪ ತೊಟ್ಟಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬ್ಯಾಡಗಿ ಪಟ್ಟಣದಲ್ಲಿ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರ ‘ಭಾರತ್‌ ಜೋಡೋ’ ಎಂಬ ನಾಟಕ ಕಂಪನಿ ಆರಂಭಿಸಿದೆ. ಕಾಂಗ್ರೆಸ್‌ ಯಾವಾಗಲೂ ‘ಭಾರತ್‌ ತೋಡೊ’ ಮಾಡಿಕೊಂಡೇ ಬಂದಿದೆ. ಸತೀಶ ಜಾರಕಿಹೊಳಿ ಅವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರೂ, ಸಿದ್ದರಾಮಯ್ಯ, ರಾಹುಲ್‌ಗಾಂಧಿ ಅವರು ಖಂಡಿಸದೇ ಮೌನ ತಾಳಿದ್ದಾರೆ. ಜಾರಕಿಹೊಳಿ ಹೇಳಿಕೆಗೆ ನಿಮ್ಮ ಸಮ್ಮತಿ ಇದೆಯೇ? ಅವರನ್ನು ಪಕ್ಷದಿಂದ ಉಚ್ಛಾಟಿಸುವುದಿಲ್ಲವೇ? ಎಂದು ಪ್ರಶ್ನಿಸಿದರು.

ಭವ್ಯ ಭಾರತಕ್ಕೆ ಮಾರಕವಾಗಿರುವ ಶಕ್ತಿಗಳನ್ನು ಮನೆಗೆ ಕಳುಹಿಸುವ ಕಾಲ ಕೂಡಿ ಬಂದಿದೆ. ಕ್ಲುಲಕ್ಕ ಮಾತುಗಳಿಂದ ದೇಶ ಒಡೆಯುವವರಿಗೆ ಪೂರ್ಣ ವಿರಾಮ ಹಾಕಬೇಕಿದೆ. ಬಿ.ಎಸ್‌. ಯಡಿಯೂರಪ್ಪ ಅವರು ಎಲ್ಲ ಸಮುದಾಯಗಳ ಅಭಿವೃದ್ಧಿಗಾಗಿ ಕಾರ್ಯಕ್ರಮ ರೂಪಿಸಿದ್ದರು. ಭಾಗ್ಯಲಕ್ಷ್ಮಿ ಯೋಜನೆಯ ಶೇ 35ರಷ್ಟು ಫಲಾನುಭವಿಗಳು ಅಲ್ಪಸಂಖ್ಯಾತ ಬಂಧುಗಳು. ಸಂಧ್ಯಾ ಸುರಕ್ಷಾ, ಬೈಸಿಕಲ್‌ ಯೋಜನೆಗಳಲ್ಲಿ ನಾವು ಜಾತಿ ನೋಡಿಲ್ಲ. ಎಲ್ಲರ ಅಭಿವೃದ್ಧಿಗಾಗಿ ಬಿಜೆಪಿ ಬದ್ಧವಾಗಿದೆ ಎಂದು ಹೇಳಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *