Breaking News

ಸಿಎಂಗೆ ತಿರುಗೇಟು ನೀಡಿದ  ಸಿ.ಎಂ.ಇಬ್ರಾಹಿಂ



ಬೆಂಗಳೂರು: ಬಾಯಿಯ ಬಂಡವಾಳ ಇಟ್ಟುಕೊಂಡೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಅವರ ಪರ ಭಾಷಣ ಮಾಡಿದಾಗ ನಮ್ಮ ಬಾಯಿಯೇ ಬಂಡವಾಳ ಆಗಿರಲಿಲ್ಲವೇ ಎಂದು ಜೆಡಿಎಸ್‌ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ತಿರುಗೇಟು ನೀಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಇಬ್ರಾಹಿಂಗೆ ಬಾಯಿಯೇ ಬಂಡವಾಳ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಪಾದಯಾತ್ರೆಯಲ್ಲಿ ನನ್ನ ಕ್ಯಾಸೆಟ್‌ ಹಾಕಿಕೊಂಡು ಮತ ಕೇಳಲಿಲ್ಲವೇ? ಸುತ್ತೂರು ಮಠದ ಶ್ರೀಗಳ ಸಹಾಯ ಇಲ್ಲದೆ ವರುಣಾದಲ್ಲಿಯೂ ಜಯ ಗಳಿಸುವುದಿಲ್ಲ. ಸಿದ್ದರಾಮಯ್ಯರನ್ನು ನೋಡಿದರೆ ಅಯ್ಯೋ ಪಾಪ ಎನಿಸುತ್ತಿದೆ. ಅವರಿಗೆ ಸ್ಪರ್ಧಿಸಲು ಕ್ಷೇತ್ರ ಸಿಗುತ್ತಿಲ್ಲ. ಕಾಂಗ್ರೆಸ್‌ಗೆ ಹಲವರು ಬರುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೆಚ್ಚು ಆಸಕ್ತಿ ತೋರುತ್ತಿಲ್ಲ ಎಂದು ಹರಿಹಾಯ್ದರು. ಸಿದ್ದರಾಮಯ್ಯ ವಿರುದ್ಧ ಹಲವು ಅಪಾದನೆಗಳು ಇವೆ. ರೀಡೂ, ಹೂಬ್ಲೆಟ್‌ ವಾಚ್‌ ಸೇರಿದಂತೆ ಬೇರೆ ಬೇರೆ ಆರೋಪಗಳಿವೆ. ನಮ್ಮ ಮೇಲೆ ಯಾವುದೇ ಆರೋಪಗಳಿಲ್ಲ.

ನಾನೇನೋ ನಮ್ಮ ಸ್ನೇಹಿತರು ಎಂದು ಇತಿಮಿತಿಯಲ್ಲಿ ಮಾತನಾಡುತ್ತಿದ್ದೇನೆ. ಮುಖ್ಯಮಂತ್ರಿಯಾಗಿದ್ದವರು ಮತ್ತು ವಯಸ್ಸಾಗಿದೆ ಎಂದು ಮಾತನಾಡುತ್ತಿದ್ದೇನೆ. ನನ್ನನ್ನು ಪಕ್ಷದ ಅಧ್ಯಕ್ಷನಾಗಿ ಎಲ್ಲರೂ ಸೇರಿ ಆಯ್ಕೆ ಮಾಡಿದ್ದಾರೆ. ಇನ್ನು, ಕಾಂಗ್ರೆಸ್‌ನಿಂದ ಬರುವವರ ಪಟ್ಟಿಯನ್ನು ಈಗ ಬಿಡುಗಡೆ ಮಾಡುವುದಿಲ್ಲ. ಬಿಡುಗಡೆ ಮಾಡಿದರೆ ಅವರ ಮನೆಗೆ ಹೋಗಿ ಇವರೆಲ್ಲಾ ಗೋಗರೆಯುತ್ತಾರೆ. ಅದಕ್ಕೆ ನಮಗೆ ಆತುರವಿಲ್ಲ. ಡಿಸೆಂಬರ್‌ವರೆಗೆ ಆರಾಮಾಗಿ ಇರುತ್ತೇವೆ. ನಾವೇನು ಪಟ್ಟಿನಾ ಹೈಕಮಾಂಡ್‌ಗೆ ನೀಡಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *