Breaking News

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ  : ಶಿಕ್ಷಕ‌ ಬಂಧನ



ಹೆಬ್ಬಾಳ : ನಗರದ ಠಾಣೆ ವ್ಯಾಪ್ತಿಯಲ್ಲಿರುವ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ದೈಹಿಕ ಶಿಕ್ಷಕನನ್ನು ಬಂಧಿಸಲಾಗಿದೆ.

ಪೋಕ್ಸೊ ಕಾಯಿದೆಯಡಿ ಬಂಧಿತನಾಗಿರುವ ಶಿಕ್ಷಕನನ್ನು ಆಂಜಿನಪ್ಪ (೫೦) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಮನೆಯಲ್ಲಿ ಮಂಕಾಗಿದ್ದ ಸಂದರ್ಭದಲ್ಲಿ ವಿಚಾರಿಸಿದ ಈ ಸಂಗತಿ ಬೆಳಕಿಗೆ ಬಂದಿದ್ದು, ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈಗ ಆರೋಪಿಯನ್ನು ಬಂಧಿಸಲಾಗಿದೆ.

ಈ ನಡುವೆ ಇದೇ ಶಿಕ್ಷಕ ಇನ್ನೂ ಹಲವು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು, ಕಿರುಕುಳ ಮಾಡಿರುವುದು ಬೆಳಕಿಗೆ ಬಂದಿದೆ. ಇನ್ನೂ ಮೂವರು ವಿದ್ಯಾರ್ಥಿನಿಯರು ಆಂಜಿನಪ್ಪ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಇದೆ. ಹೆಬ್ಬಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

೨೦೧೫ರ ಫೆಬ್ರವರಿಯಲ್ಲಿ ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಂದು ಹಾಕಿದ್ದ ವ್ಯಕ್ತಿಯೊಬ್ಬನಿಗೆ ಕೋರ್ಟ್‌ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಪರಶುರಾಮ ದೇಸಾಯಿ ಎಂಬಾತ ಪತ್ನಿ ಯಲ್ಲಮ್ಮ ವರದಕ್ಷಿಣೆ ತರಲು ನಿರಾಕರಿಸಿದಳೆಂಬ ಕಾರಣಕ್ಕೆ ಆಕೆಯನ್ನು ಇರಿದು ಕೊಂದು ಹಾಕಿದ್ದ. ಇದೀಗ 72ನೇ‌ ಸಿಸಿಹೆಚ್ ನ್ಯಾಯಾಲಯ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *