ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ.
ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಬಿಜೆಪಿ ಯುವ ಮೋರ್ಚಾ ದಿಂದ ಪ್ರತಿಭಟನೆ ನಡೆಸಲಿದ್ದಾರೆ.
ಇತ್ತ, ಸತೀಶ್ ಜಾರಕಿಹೊಳಿ ಹೇಳಿಕೆಗೆ ಬಿಜೆಪಿ ಕೊತಕೊತ ಕುದಿಯುತ್ತಿದೆ. ಬೆಳಗಾವಿಯಲ್ಲೂ ಸಹ ಪ್ರತಿಭಟನೆಯ ಕಾವು ರಂಗೇರಲಿದೆ. ಸತೀಶ್ ಜಾರಕಿಹೊಳಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಪಟ್ಟು ಹಿಡಿದುಕೊಂಡಿದೆ. ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇನ್ನೇನು ಕೆಲವೇ ಹೊತ್ತಿನಲ್ಲಿ ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

