Breaking News

ಬೆಂಗಳೂರುರಿಗೆ ಪ್ರಧಾನಿ ಆಗಮನ : 4000 ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜನೆ


ಬೆಂಗಳೂರು: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಲ್ಕು ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಬಂದೋಬಸ್ತ್‌ ವ್ಯವಸ್ಥೆಯ ಸಿದ್ಧತೆ ಪರಿಶೀಲಿಸಿದ ಬಳಿಕ ಮಾತನಾಡಿದ ಸಚಿವರು, ಪ್ರಧಾನ ಮಂತ್ರಿಗಳ ಕಾರ್ಯಕ್ರಮ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಅನಾವರಣ, ವಂದೇ ಭಾರತ್‌ ರೈಲಿಗೆ ಚಾಲನೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ನ ಉದ್ಘಾಟನೆ ಸಮಾರಂಭ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಕೆಂಪೇಗೌಡರ ಪ್ರತಿಮೆ ಅನಾವರಣದ ಬಳಿಕ ಬೃಹತ್‌ ಜನಸ್ತೋಮ ಉದ್ದೇಶಿಸಿ ಪ್ರಧಾನಿಗಳು ಮಾತನಾಡಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *