Breaking News

ತನ್ನ ಪರ ಘೋಷಣೆ ಕೂಗಿದವರ ವಿರುದ್ಧವೇ ಮಾಜಿ ಸಿಎಂ ಗರಂ



ಹುಬ್ಬಳ್ಳಿ: ತನ್ನ ಪರ ಘೋಷಣೆ ಕೂಗಿದವರ ವಿರುದ್ಧವೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಸಿದ್ದರಾಮಯ್ಯ ಅವರು ಮಂಗಳವಾರ ಬೆಳಗ್ಗೆ ನಗರದ ಹೊಟೇಲ್‌ವೊಂದಕ್ಕೆ ಆಗಮಿಸಿದ್ದರು. ಈ ವೇಳೆ ನೂರಾರು ಕಾರ್ಯಕರ್ತರೊಂದಿಗೆ ಆಗಮಿಸಿದ ಕಾಂಗ್ರೆಸ್ ಸ್ಥಳೀಯ ಮುಖಂಡ ಗಿರೀಶ ಗದಿಗೆಪ್ಪಗೌಡರ ಅವರು ‘ಮುಂದಿನ ಸಿಎಂ ಸಿದ್ದರಾಮಯ್ಯ ಅವರಿಗೆ ಜಯವಾಗಲಿ’ ಎಂದು ಘೋಷಣೆ ಕೂಗಿದರು.

ಇದಕ್ಕೆ ಪ್ರತಿಯಾಗಿ ಗದಿಗೆಪ್ಪಗೌಡರ ಜತೆ ಬಂದವರು ‘ಹೌದೋ ಹುಲಿಯಾ’ ಎಂದು ಪ್ರತಿಕ್ರಿಯಿಸಿದರು. ಈ ಸಂಗತಿ ಸಿದ್ದರಾಮಯ್ಯ ಅವರನ್ನು ಕೆರಳಿಸಿತು. ಘೋಷಣೆ ಕೂಗುವವರನ್ನು ಸುಮ್ಮನಿರುವಂತೆ ಗದರಿದರು. ಬಳಿಕ ಘೋಷಣೆ ಕೂಗುವವರು ತಣ್ಣಗಾದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *