Breaking News

ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘ ಪಾಲಿಕೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು.

ಈ ವೇಳೆ ಪಾಲಿಕೆ ಗುತ್ತಿಗೆ ಪೌರಕಾರ್ಮಿಕರ ಕುರಿತಂತೆ ದಲಿತ ವಿರೋಧಿ ಹಾಗೂ ತಾರತಮ್ಯ ನೀತಿಯನ್ನು ಅನುಸರಿಸುತ್ತಿದ್ದಾರೆ. ಕಳೆದ 15 ವರ್ಷಗಳು ಗತಿಸುತ್ತಿದ್ದರು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಸಭೆಯ ನಡಾವಳಿ ಅನುಷ್ಠಾನ ಮಾಡದೇ ಇರುವುದು ಖಂಡನೀಯ. ಕೂಡಲೇ ಪಾಲಿಕೆ ಪೌರಕಾರ್ಮಿಕ ಸಂಘದ ಬಹುದಿನಗಳ ಹಕ್ಕೋತ್ತಾಯವನ್ನು ಈಡೇರಿಕೆಗೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪೌರಕಾರ್ಮಿಕರ ಮತ್ತು ನೌಕರರ ಸಂಘದ ಅಧ್ಯಕ್ಷ ಡಾ.ವಿಜಯ ಗುಂಟ್ರಾಳ, ಕಿರಣ ಸೋಮರಡ್ಡಿ, ನಾಗರಾಜ್, ಸುಮಿತ್ರಾ, ಮಲ್ಲಿಕಾರ್ಜುನ ಛಲವಾದಿ ಸೇರಿದಂತೆ ಮುಂತಾದವರು ಇದ್ದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *