ಹುಬ್ಬಳ್ಳಿ : ಮತ್ತೆ ಕಾವೇರಿದ್ದ ಈದ್ಗಾ ಬಿಸಿಯನ್ನು ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ತಣ್ಣಗಾಗುವಂತೆ ಮಾಡಿದ್ದಾರೆ. ಕೆಲವು ನಿಯಮಗಳನ್ನು ಜಾರಿ ಮಾಡಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶವನ್ನು ನೀಡಿದ್ದಾರೆ. ಟಿಪ್ಪು ಜಯಂತಿ ಅಷ್ಟೇ ಅಲ್ಲದೇ ಉಳಿದ ಎಲ್ಲ ಕಾರ್ಯಕ್ರಮಗಳನ್ನು ಈದ್ಗಾ ಮೈದಾನದಲ್ಲಿ ಮಾಡುವಂತೆ ಮೇಯರ್ ಒಪ್ಪಿಗೆ ಸೂಚಿಸಿದ್ದಾರೆ.
ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಸೇರಿದಂತೆ ಎಲ್ಲ ಜಯಂತಿ ಆಚರಣೆಗೆ ಅನುಮತಿ ನೀಡಲಾಗಿದ್ದು, ಕೆಲವು ನೀತಿ ನಿಯಮಗಳನ್ನು ಹಾಕಿ ಅನುಮತಿ ನೀಡಲಾಗಿದೆ.
ಎಐಎಂಐಎಂ ಪಕ್ಷದ ಜಿಲ್ಲಾ ಸಂಯೊಜಕ ವಿಜಯ ಗುಂಟ್ರಾಳ ಆಚರಣೆಗೆ ಅನುಮತಿ ಕೇಳಿದ್ದರು. ಆದ್ದರಿಂದ ಇನ್ನು ಮುಂದೆ ಈದ್ಗಾ ಮೈದಾನದಲ್ಲಿ ಎಲ್ಲ ಜಯಂತಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇನ್ನೂ ಮುಂದೆ ಈದ್ಗಾ ಮೈದಾನದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ಮಾಡಬಹುದು. ಯಾರೇ ಕಾರ್ಯಕ್ರಮ ಮಾಡಿದರೆ ಹತ್ತು ಸಾವಿರ ಠೇವಣಿ ಇಡಬೇಕು. ಕಾನೂನು ಬಾಹಿರ ಚಟುವಟಿಕೆ ಮಾಡಬಾರದು ಎಂದು ಮಹಾನಗರ ಪಾಲಿಕೆ ಮೇಯರ್, ಸಭಾನಾಯಕ, ವಿರೋಧ ಪಕ್ಷದ ನಾಯರಕರ ಸಭೆ ನಂತರ ಹೇಳಿದರು.
ಎಐಎಂಐಎಂ ಜಿಲ್ಲಾ ಅಧ್ಯಕ್ಷ ನಜೀರ್ ಹೊನ್ನಾಳ ಹೇಳಿಕೆ
ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಮನವಿ ವಿಚಾರ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಎಐಎಂಐಎಂ ಪಕ್ಷದ ಜಿಲ್ಲಾ ಅಧ್ಯಕ್ಷ ವಿರೋಧ ವ್ಯಕ್ತಪಡಿಸಿದ್ದಾರೆ. ಎಐಎಂಐಎಂ ಪಕ್ಷದಲ್ಲಿಯೇ ಭಿನ್ನಾಭಿಪ್ರಾಯ ಉಂಟಾಗಿದೆ. ಹುಬ್ಬಳ್ಳಿಯಲ್ಲಿ ಮೇಯರ್ ಈರೇಶ್ ಅಂಚಟಗೇರಿ ಸಮ್ಮುಖದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ನಜೀರ್ ಹೊನ್ನಾಳ, ಮೇಯರ್ ಈರೇಶ್ ಅಂಚಟಗೇರಿ ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆ ನಿರ್ಣಯ ನಾವು ಒಪ್ಪಲ್ಲ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

