ದಾವಣಗೆರೆ : ಹೊನ್ನಾಳಿಯ ಎಂ.ಆರ್.ಚಂದ್ರಶೇಖರ ಸಾವಿನ ಪ್ರಕರಣವನ್ನು ಎಲ್ಲಾ ಕೋನಗಳಿಂದಲೂ ತನಿಖೆ ನಡೆಸುವವರೆಗೂ ಪೊಲೀಸರು ಯಾವುದೇ ತೀರ್ಮಾನಕ್ಕೂ ಬರಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಹೊನ್ನಾಳಿಯಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಸಹೋದರ ಎಂ.ಪಿ.ರಮೇಶ ಹಾಗೂ ಕುಟುಂಬಕ್ಕೆ ಚಂದ್ರು ನಿಧನದ ಹಿನ್ನೆಲೆಯಲ್ಲಿ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಚಂದ್ರು ಮರಣೋತ್ತರ ಪರೀಕ್ಷೆ ವರದಿ ಇನ್ನು 2 ದಿನಗಳಲ್ಲೇ ಬರಲಿದೆ ಎಂದರು. ಮರಣೋತ್ತರ ಪರೀಕ್ಷೆ ವರದಿ, ವಿಧಿ ವಿಜ್ಞಾನ ವರದಿ ಆಧಾರ ಹಾಗೂ ಮರು ಸೃಷ್ಟಿ(ರಿಕ್ರಿಯೇಷನ್ ಆಫ್ ಸೀನ್ ಆಫ್ ಕ್ರೈಂ)ಯ ತನಿಖೆ ಆಗಬೇಕು. ಎಲ್ಲಾ ತನಿಖೆಗಳೂ ಮುಗಿದಾಗ ಮಾತ್ರ ಚಂದ್ರಶೇಖರ ಸಾವಿನ ಪ್ರಕರಣದ ನಿಖರತೆ ಸ್ಪಷ್ಟವಾಗಿ ತಿಳಿಯಲಿದೆ. ಮರಣೋತ್ತರ ಪರೀಕ್ಷೆ ನಂತರ ಪ್ರತ್ಯೇಕ ತನಿಖಾ ತಂಡದ ಅಗತ್ಯತೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

