Breaking News

ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ : ಕೆಪಿಸಿಸಿ ಕಾರ್ಯಾಧ್ಯಕ್ಷ ವಿರುದ್ಧ ದೂರು ದಾಖಲು



ಬೆಂಗಳೂರು : ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ವಿರುದ್ಧ ವಕೀಲರೊಬ್ಬರು ವಿಚಾರಣಾ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದಾರೆ.

ನಗರದ ವಕೀಲ ಕೆ. ದಿಲೀಪ್‌ ಕುಮಾರ್‌ ಅವರು ಬುಧವಾರ ನಗರದ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದು, ಗಲಭೆ ಮತ್ತು ಮಾನಹಾನಿ ಪರಿಚ್ಛೇದ ಅಡಿ ಅಪರಾಧ ಕೃತ್ಯ ಎಸಗಿದ ಸಂಬಂಧ ಸತೀಶ್‌ ಜಾರಕಿಹೊಳಿ ವಿರುದ್ಧ ಕಾಗ್ನಿಜೆನ್ಸ್‌ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.ನ್ಯಾಯಾಲಯವು ದೂರಿನ ವಿಚಾರಣೆಯನ್ನು ನ.18ಕ್ಕೆ ಮುಂದೂಡಿದೆ.

ಹಿಂದೂ ನಮ್ಮ ಪದವೇ ಅಲ್ಲ. ಇದು ಪರ್ಷಿಯನ್‌ನಿಂದ ಬಂದಿರುವ ಪದ. ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ. ಆ ಪದದ ಅರ್ಥ ತಿಳಿದರೆ ನಾಚಿಕೆಯಾಗುತ್ತದೆ ಎಂದು ಸತೀಶ್‌ ಜಾರಕಿಹೊಳಿಯವರು ಹೇಳಿರುವ ಸುದ್ದಿಯನ್ನು ಓದಿದ ತಮಗೆ ಅವಮಾನವಾಗಿದ್ದು, ಮಾನಸಿಕವಾಗಿ ಬಹಳ ಖಿನ್ನತೆಗೆ ಒಳಗಾಗಿದ್ದೇನೆ. ನನಗೆ ಸಾಕಷ್ಟುಇತರೆ ಧರ್ಮದ ಸಾಕಷ್ಟುಕಕ್ಷಿದಾರರು ಹಾಗೂ ಸ್ನೇಹಿತರಿದ್ದಾರೆ. ಅವರು ತಮ್ಮನ್ನು ಅವಮಾನ ಮತ್ತು ನಿರ್ಲಕ್ಷದ ನೋಡಿ, ನಕ್ಕಿದ್ದಾರೆ, ಹಿಂದೂ ಧರ್ಮದ ಕೆಲ ಸ್ನೇಹಿತರು ಸಹ ಸತೀಶ್‌ ಜಾರಕಿಹೊಳಿ ಹೇಳಿಕೆಯಿಂದ ಅವಮಾನ ಮತ್ತು ಮಾನಹಾನಿಗೆ ಗುರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *