Breaking News

ಅರಣ್ಯ ವೀಕ್ಷಣೆ ವೇಳೆ ಸಿಬ್ಬಂದಿ ಸಾವು



ಕೊಡಗು: ಅರಣ್ಯ ವೀಕ್ಷಣೆ ವೇಳೆ ಅವಘಡವೊಂದು ಸಂಭವಿಸಿದೆ. ಭಾಗಮಂಡಲ ಅರಣ್ಯ ವ್ಯಾಪ್ತಿಯ ತೊಡಿಕಾನದ ಸಿಪಿಟಿ 76ರಲ್ಲಿ ಅರಣ್ಯ ಸಿಬ್ಬಂದಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

ಚಿನ್ನಪ್ಪ ಎಂ.ಹೆಚ್ ಎನ್ನುವ ಅರಣ್ಯ ಇಲಾಖೆ‌ ಸಿಬ್ಬಂದಿ ಮೃತಪಟ್ಟಿದ್ದಾರೆ. ಅರಣ್ಯದೊಳಗಿನ ಜಲಪಾತ ಬಳಿ ನೀರು ಕುಡಿಯಲು ಹೋಗಿದ್ದ ವೇಳೆ ಕಾಲು ಜಾರಿ ಜರಿಯ ಕೆಳಗೆ ಬಿದ್ದು ಮೃತಪಟ್ಟದ್ದಾರೆ ಎನ್ನಲಾಗಿದೆ. ಈ ಘಟನೆ ನಿನ್ನೆ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಘನೆಯ ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಜಲಪಾತದ ಕೆಳಭಾಗದ ನೀರಲ್ಲಿ ಬಿದ್ದು ಮೃತಪಟ್ಟಿರುವ ಚಿನ್ನಪ್ಪರವರ ಮೃತದೇಹ‌ ಪತ್ತೆಹಚ್ಚಿ ಹೊರ ತೆಗೆದಿದ್ದಾರೆ. ಈ ಘಟನೆ ಕುರಿತಂತೆ ಭಾಗಮಂಡಲ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *