ಹುಬ್ಬಳ್ಳಿ : ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ. ಹೀಗಾಗಿ ನಮಗೆ ಪ್ರತಿಭಟನೆ ಮಾಡಲು ಬಿಡುತ್ತಿಲ್ಲ. ಟಿಪ್ಪು ಹಿಂದು ಮತ್ತು ಕನ್ನಡ ವಿರೋಧಿ. ಹಾಗಾಗಿ ಎಲ್ಲಿಯೂ ಆಚರಣೆ ಮಾಡಲು ಬಿಡುವುದಿಲ್ಲ. ಯಾವುದೇ ಸಂದರ್ಭದಲ್ಲಿ ಆಚರಣೆ ತಡೆಯುತ್ತೇವೆ. ಎಲ್ಲ ಮಹಾಪುರುಷರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಮಾಡಬಾರದು.
ಆತ ದೇಶದ್ರೋಹಿ, ಯಾರ ಜಯಂತಿ ಬೇಕಾದರೂ ಮಾಡಿ ಆದರೆ ಟಿಪ್ಪು ಜಯಂತಿ ಮಾಡಬೇಡಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿ, ಮಹಾನಗರ ಪಾಲಿಕೆ ತೆಗೆದುಕೊಂಡ ನಿಲುವನ್ನು ಖಂಡಿಸುತ್ತೇವೆ.
ಟಿಪ್ಪು ಸುಲ್ತಾನ್ ಜಯಂತಿ ಬ್ಯಾನ್ ಮಾಡಲಾಗಿದೆ. ಯಾಕೆ ಅವಕಾಶ ಮಾಡಿಕೊಟ್ಟಿರಿ, ಎಐಎಂಐಎಂ ದೇಶ ದ್ರೋಹಿ ಪಕ್ಷ. ದೇಶದ್ರೋಹಿಗಳನ್ನು ಬಿಜೆಪಿ ಬೆಳೆಸುತ್ತಿದೆ. ಇದಕ್ಕೆ ನಮ್ಮ ವಿರೋಧ ವಿದೆ. ಮತಾಂತರ ಮಾಡಿದವರ ಜಯಂತಿ ಆಚರಣೆ ಸರಿಯಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

