Breaking News

ಕೆಂಪೇಗೌಡ ಅವರ 108 ಅಡಿ ಪ್ರತಿಮೆ ಸ್ಥಾಪಿಸಲು ಸರ್ಕಾರದ ಹಣ ಬಳಸಿದ್ದು ಏಕೆ? : ಡಿಕೆಶಿ


ಬೆಂಗಳೂರು :  ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಪ್ರತಿಮೆ ಸ್ಥಾಪಿಸಲು ಸರ್ಕಾರದ ಹಣ ಬಳಸಿದ್ದು ಏಕೆ? ಎಂದು ಪ್ರಶ್ನಿನಿಸಿದ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಇದು ದೊಡ್ಡ ಅಪರಾಧ ಎಂದು ಗುರುವಾರ ಹೇಳಿದ್ದಾರೆ.

ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ಬೆಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್(ಬಿಐಎಎಲ್) ಈ ಪ್ರತಿಮೆಯ ಕಾಮಗಾರಿಯನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕಿತ್ತು ಎಂದು ಶಿವಕುಮಾರ್ ತಿಳಿಸಿದ್ದಾರೆ. ಸರ್ಕಾರದಿಂದ ವಿಮಾನ ನಿಲ್ದಾಣಕ್ಕೆ ಭೂಮಿ, ಹಣ ಮತ್ತು ಇತರ ಸೌಲಭ್ಯಗಳನ್ನು ನೀಡಲಾಗಿದೆ.

ಇದರಿಂದ ಆದಾಯ ಗಳಿಸುತ್ತಿರುವ ಬಿಐಎಎಲ್ ಗೆ ಹೇಳಿದ್ದರೆ ಅವರೇ ಪ್ರತಿಮೆ ನಿರ್ಮಾಣ ಮಾಡುತ್ತಿದ್ದರು. ಆದರೆ ಸರ್ಕಾರ ದುಡ್ಡು ಹಾಕಿದ್ದು ಯಾಕೆ? ಈ ವಿಚಾರವಾಗಿ ನಾನು ಶಂಕುಸ್ಥಾಪನೆ ದಿನವೇ ಪ್ರಶ್ನಿಸಿದ್ದೇ ಎಂದಿದ್ದಾರೆ. ಇದನ್ನು  ತಿಳಿಯದವನು ಇತಿಹಾಸ ಸೃಷ್ಟಿಸಲಾರ; ಥೀಮ್ ಪಾರ್ಕ್ ಬಗ್ಗೆ ಸಚಿವರ ಮಾಹಿತಿ! ಈ ಯೋಜನೆಯು ಪ್ರತಿಮೆಯ ಜೊತೆಗೆ 23 ಎಕರೆ ಪ್ರದೇಶದಲ್ಲಿ ಹೆರಿಟೇಜ್ ಥೀಮ್ ಪಾರ್ಕ್ ಅನ್ನು ನಿರ್ಮಿಸಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *