ಮೈಸೂರು : ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರಿನಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್ ಸೇಠ್ ಘೋಷಿಸಿದರು.
ರಾಜೀವ್‌ನಗರ ಅಲ್ ಬದರ್ ಮೈದಾನದಲ್ಲಿ ಟಿಪ್ಪು ಕನ್ನಡ ರಾಜ್ಯೋತ್ಸವ ವೇದಿಕೆಯು ಗುರುವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಸ್ಲಾಂ ಧರ್ಮದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶವಿಲ್ಲ. ಇದ್ದಿದ್ದರೇ ಮನೆಗೊಂದರಂತೆ ಟಿಪ್ಪು ಪ್ರತಿಮೆ ನಿರ್ಮಾಣವಾಗುತ್ತಿತ್ತು. ನಮ್ಮನ್ನು ಒಗ್ಗಟ್ಟಾಗಿಸುವ ಶಕ್ತಿ ಟಿಪ್ಪು ಹೆಸರಿಗಿದೆ. ಇಂದು ವಿವಿಧ ಪಕ್ಷಗಳಲ್ಲಿರುವ ಒಂದೇ ಸಮುದಾಯದ ಮುಖಂಡರು ಟಿಪ್ಪು ಹೆಸರಲ್ಲಿ ಒಂದಾಗಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದರು.
ಟಿಪ್ಪು ಹೆಸರಿಗೆ ಅನೇಕ ಅಪಚಾರಗಳನ್ನು ಮಾಡಲಾಗುತ್ತಿದೆ. ಸುಳ್ಳು ಕತೆಗಳನ್ನು ಸೃಷ್ಟಿಸಿ ಜನರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಟಿಪ್ಪು ಅಭಿಮಾನಿಗಳು, ನಮ್ಮ ಸಮುದಾಯ ಎಲ್ಲವನ್ನೂ ಮೌನವಾಗಿ ಸಹಿಸುತ್ತಿದೆ. ಕಾಲ ಬಂದಾಗ ಅದಕ್ಕೆ ಸ್ಪಷ್ಟಉತ್ತರ ನೀಡುತ್ತೇವೆ ಎಂದು ಅವರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

