Breaking News


ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿ ಹಗರಣ : 7 ಜನ ಬಂಧನ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೆಲವು ಸಿಆರ್ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ ಮತ್ತೆ ಏಳು ಜನರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬಂಧಿತ ಈ ಆರೋಪಿಗಳನ್ನು ಜಮ್ಮುವಿನಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ ನಂತರ ಸಿಬಿಐ ವಶಕ್ಕೆ ಪಡೆದಿದೆ ಎಂದು ಅವರು ಹೇಳಿದ್ದಾರೆ. ಸಿಆರ್ಪಿಎಫ್ ಹೆಡ್ ಕಾನ್ಸ್ಟೇಬಲ್ ಪವನ್ ಕುಮಾರ್, ಸಿಆರ್ಪಿಎಫ್ ಕಾನ್ಸ್ಟೆಬಲ್ಗಳಾದ ಅತುಲ್ ಕುಮಾರ್, ಅಮಿತ್ ಕುಮಾರ್ ಶರ್ಮಾ ಮತ್ತು ಸುನೀಲ್ ಶರ್ಮಾ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್ ಜೈಸೂರಿಯಾ ಶರ್ಮಾ ಮತ್ತು ಖಾಸಗಿ ವ್ಯಕ್ತಿಗಳಾದ ತಾರ್ಸೆಮ್ ಲಾಲ್ ಹಾಗೂ ಆಶೀಶ್ ಯಾದವ್ ಅವರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನ 36 ಕಡೆ ಸಿಬಿಐ ದಾಳಿ, ಪರಿಶೀಲನೆ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಮಂಗಳವಾರ ಜಮ್ಮು, ಪಠಾಣ್ಕೋಟ್, ರೆವಾರಿ ಮತ್ತು ಕರ್ನಾಲ್ನ ಏಳು ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ 13 ಮಂದಿಯನ್ನು ಬಂಧಿಸಲಾಗಿತ್ತು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *