ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಆಹ್ವಾನಿಸಿಲ್ಲ ಎಂದು ಜೆಡಿಎಸ್ ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಮೊದಲ ಆಹ್ವಾನ ಪತ್ರಿಕೆಯನ್ನು ಎಚ್.ಡಿ.ದೇವೇಗೌಡರಿಗೆ ನೀಡಿದ್ದೇವೆ ಎಂದು ಸ್ಪಷ್ಟನೆ ನೀಡಿದೆ.
ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ಎಚ್.ಡಿ.ದೇವೇಗೌಡರಿಗೆ ಮೊದಲ ಆಹ್ವಾನ ಪತ್ರ ಹೋಗಿದ್ದು, ಮಾತ್ರವಲ್ಲ ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದು ಟ್ವೀಟ್ ಮೂಲಕ ಬಿಜೆಪಿ ತಿರುಗೇಟು ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

