ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹಿಂಗಾರು ಮಳೆ ಚುರುಕುಕೊಳ್ಳುತ್ತಿದೆ.
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಕರ್ನಾಟಕದ ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

