ಬೆಳಗಾವಿ : ‘ಹಿಂದು’ ಎನ್ನುವುದು ಪರ್ಷಿಯನ್ನಿಂದ ಬಂದ ಪದವಾಗಿದ್ದು, ಈ ಪದದ ಅರ್ಥ ಅಶ್ಲೀಲವಾಗಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ, ಬಳಿಕ, ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ವಿವಾದ ತಣ್ಣಗಾಗಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಈಗ ಮತ್ತೊಂದು ವಿವಾದ ಸುತ್ತಿಕೊಂಡಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆ ನ.6ರಂದು ಹಮ್ಮಿಕೊಂಡಿದ್ದ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ ಕಾರ್ಯಕ್ರಮದಲ್ಲಿ ಧರ್ಮವೀರ ಸಂಭಾಜಿ ಮಹಾರಾಜರಿಗೆ ಅವರು ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಜಾರಕಿಹೊಳಿಯವರು ಮಾಡಿರುವ ಭಾಷಣದ ತುಣುಕನ್ನು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಾಕಿ, ಖಂಡನೆ ವ್ಯಕ್ತಪಡಿಸಿದ್ದಾರೆ. 42 ಸೆಕೆಂಡ್ಗಳ ಭಾಷಣದ ತುಣುಕಿನ ವಿಡಿಯೋವನ್ನು ಕೂಡ ಅಪ್ಲೋಡ್ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

