ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ವ್ಯಾಪಕ ಭ್ರಷ್ಟಾಚಾರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದ್ದು, ಅವರಿಂದ ಉತ್ತರ ಬರುವ ಸಾಧ್ಯತೆಯಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶುಕ್ರವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪ್ರತಿಪಕ್ಷಗಳ ಪತ್ರಗಳಿಗೆ ಪ್ರಧಾನಿ ಉತ್ತರಿಸುತ್ತಾರೆ. ಕಾಂಗ್ರೆಸ್ ಆರೋಪಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಕೂಡಾ ಉತ್ತರಿಸುವ ವಿಶ್ವಾಸವಿದೆ ಎಂದರು. ರಾಜ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್, ಗುತ್ತಿಗೆದಾರರೊಬ್ಬರು ಕಮಿಷನ್ ಬೇಡಿಕೆಯ ಮೇರೆಗೆ ದಯಾಮರಣಕ್ಕೆ ಅನುಮತಿ ಕೋರಿದ್ದಾರೆ ಎಂದು ಆರೋಪಿಸಿದರು.
ಮೋದಿ ಭೇಟಿಗೂ ಮುನ್ನ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿರುವಂತೆ ಭ್ರಷ್ಟಾಚಾರವನ್ನು ಮುಚ್ಚಿಡಬೇಡಿ ಎಂಬ ಸಂದೇಶವನ್ನು ಪಕ್ಷದವರಿಗೆ ರವಾನಿಸಬೇಕು ಎಂದು ಒತ್ತಾಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

