ಬೆಂಗಳೂರು: ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ. ಕಾರ್ಯಕ್ರಮದ ವೇಳೆ ಗಣ್ಯ ವ್ಯಕ್ತಿಗಳು ಕೆಂಪೇಗೌಡರ ಪ್ರತಿಮೆ ಬಳಿ ನಿಂತು ಪ್ರಧಾನಿ ಮೋದಿಯವರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಆದಿಚುಂಚನಗಿರಿ ಶ್ರೀಗಳಾದ ನಿರ್ಮಲಾನಂದ ಸ್ವಾಮೀಜಿಯವರ ಹೆಗಲ ಮೇಲೆ ಕಂದಾಯ ಸಚಿವ ಆರ್.ಅಶೋಕ್ ಕೈ ಹಾಕಿರುವ ಫೋಟೋ ವೈರಲ್ ಆಗಿದೆ.
ಈ ಫೋಟೋವನ್ನು ಟ್ವಿಟರ್‍ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ಸಚಿವ ಆರ್.ಅಶೋಕ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಸ್ವಾಮೀಜಿಗಳ ಹೆಗಲ ಮೇಲೆ ಕೈ ಹಾಕುವ ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲವೆಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

