ಹುಬ್ಬಳ್ಳಿ : ಕಾಂಗ್ರೆಸ್ ನಾಯಕರು ಟಿಪ್ಪು ಸುಲ್ತಾನ್ ಮೂರ್ತಿ ನಿರ್ಮಾಣ ಮಾಡಿದರೆ ಜನರು ಅವರನ್ನು ಮನೆಗೆ ಕಳುಹಿಸುತ್ತಾರೆ ಎಂದು ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರ
ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ವಿಚಾರ ಕುರಿತು ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತಪಡಿಸುತಿದ್ದುಟಿಪ್ಪು ಪ್ರತಿಮೆ ಮಾಡಲಿ ಅವರನ್ನ ಜನ ಮನೆಗೆ ಕಳಿಸುತ್ತಿದೆ. ಟಿಪ್ಪು ಸುಲ್ತಾನ್ ಪ್ರತಿಮೆಗೆ ಬೆಂಬಲ ಕೊಟ್ಟವರನ್ನು ಮನೆಗೆ ಕಳಸೇ ಕಳಸ್ತಾರೆ. ನಾವು ಈಗಲೂ ಟಿಪ್ಪು ಜಯಂತಿಯ ವಿರೋಧ ಇದೆ ಎಂದ ಅವರು, ಸರ್ಕಾರದಿಂದ ಟಿಪ್ಪು ಜಯಂತಿ ಮಾಡಬಾರದು ಅನ್ನೋದಿದೆ . ಈದ್ಗಾ ಮೈದಾನದಲ್ಲಿ ನಾವೇನು ಟಿಪ್ಪು ಜಯಂತಿ ಮಾಡಿ ಅಂತಾ ಹೇಳಿಲ್ಲ ಎಂದರು. ಟಿಪ್ಪು ಸುಲ್ತಾನ್ ಒಬ್ಬ ಮತಾಂಧ, ದೇಶದ್ರೋಹಿ,ಟಿಪ್ಪು ಕನ್ನಡ ವಿರೋಧಿ ಇದು ನನ್ನ ವಯಕ್ತಿಕ ನಿಲುವು ಮತ್ತು ಪಕ್ಷದ ನಿಲವು ಎಂದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.ಯಾವುದೇ ಮೂರ್ತಿ ನಿಲ್ಲಿಸಬೇಕು ಅಂದ್ರು ಸರ್ಕಾರದ ಅನುಮತಿ ಬೇಕೇ ಬೇಕು ಎಂದ ಅವರು ಮುಂದೆ ಜನ ಇದಕ್ಕೆಲ್ಲ ಉತ್ತರ ಕೊಡ್ತಾರೆ,ನಾವು ಯಾವ ಕಾಲದಲ್ಲಿ ಉತ್ತರ ಕೊಡಬೇಕು ಕೊಡ್ತೀವಿ ಎಂದು ಸಚಿವ ಪ್ರಲ್ಹಾದ್ ಜೋಶಿ ಎಂದು ಎಚ್ಚರಿಕೆ ನೀಡಿದರು. ನಾವು ಬೇಜಾಬ್ದರಿಯಿಂದ ಮಾತಾಡೋಕೆ ಆಗಲ್ಲ ಎಂದು ತನ್ವೀರ್ ಸೇಠ್ ಗೆ ಟಾಂಗ್ ನೀಡಿದ ಜೋಶಿ ಅವರು ಅವರೇನು ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ ಮಾಡಿ ಊದಭತ್ತಿ ಬೆಳಗಿ ಆರತಿ ಮಾಡ್ತಾರಾ ನೋಡೋಣ ಎಂದರು. ಕೇವಲ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣಕ್ಕೆ ಇದೊಂದು ವೇದಿಕೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

