Breaking News

ಬೆಂಗಳೂರುನಲ್ಲಿ ಪ್ರಧಾನಿ ಕಾರ್ಯ ಕ್ರಮ : ಬಿಜೆಪಿ ಮುಖಂಡನ ವಿರುದ್ಧ ಪೊಲೀಸರಿಗೆ ದೂರು


ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ್ದು, ಈ ಕಾರ್ಯಕ್ರಮಕ್ಕಾಗಿ ಕೆಲಸ ಮಾಡಲು ಕರೆ ತಂದಿದ್ದ ಕೂಲಿ ಕಾರ್ಮಿಕರಿಗೆ ಬಾಕಿ ಹಣ ಪಾವತಿ ಮಾಡದ ಸ್ಥಳೀಯ ಬಿಜೆಪಿ ಮುಖಂಡನ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ಸ್ಥಳೀಯ ಬಿಜೆಪಿ ಮುಖಂಡ ನಂದೀಶ್ ಅವರ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ 40 ಕಾರ್ಮಿಕರು ದೂರು ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ಪ್ರತಿಮೆಯ ಸ್ಥಳದಲ್ಲಿ ಕೆಲಸ ಮಾಡಲು ಈ ಕಾರ್ಮಿಕರನ್ನು ಕರೆದುಕೊಂಡು ಹೋಗಲಾಗಿತ್ತು.

ಬಿಜೆಪಿ ಟೀಕಿಸಿದ ಕಾಂಗ್ರೆಸ್ ಪ್ರತಿ ಕಾರ್ಯಕರ್ತನಿಗೆ 500 ರೂಪಾಯಿ ನೀಡುವುದಾಗಿ ಭರವಸೆ ನೀಡಿದ ನಂದೀಶ್ ಅವರು, ಕಾರ್ಯಕ್ರಮ ಮುಗಿದ ಬಳಿಕ ಕೇವಲ 100 ರೂ. ನೀಡಿದ್ದಾರೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *