ಬೆಳಗಾವಿ : ಜಿಲ್ಲೆಯ ಗೋಕಾಕ್‌ನಲ್ಲಿ ಇಂದು ಬೃಹತ್ ಲಿಂಗಾಯತ ಪಂಚಮಸಾಲಿ ಸಮಾವೇಶ ನಡೆಯಲಿದೆ. ಗೋಕಾಕ ನಗರದ ನ್ಯೂ ಇಂಗ್ಲೀಷ್ ಶಾಲಾ ಆವರಣದಲ್ಲಿ ಸಮಾವೇಶ ನಡೆಯಲಿದೆ. ಇದಕ್ಕೂ ಮುನ್ನ ಗೋಕಾಕ್‌ನಲ್ಲಿ ಬೃಹತ್ ರ‌್ಯಾಲಿ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬೃಹತ್ ರ‌್ಯಾಲಿಯನ್ನು ಆಯೋಜಿಸಲಾಗಿದೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ ಬಸವೇಶ್ವರ ವೃತ್ತ ಮಾರ್ಗವಾಗಿ ಸಮಾವೇಶ ನಡೆಯುವ ಸ್ಥಳಕ್ಕೆ ರ‌್ಯಾಲಿ ತಲಪಲಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆಯುತ್ತಿದೆ.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್, ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಸೇರಿ ಹಲವರು ಭಾಗವಹಿಸುವ ನಿರೀಕ್ಷೆ ಇದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

