Breaking News

ಸರ್ಕಾರಕ್ಕೆ ಪ್ರಶ್ನಿಸಿದ ಡಿಕೆಶಿ


ಬೆಂಗಳೂರು: “ಕಮೀಷನ್ ಪಡೆಯಲು ಕೆಂಪೇಗೌಡ ಪ್ರತಿಮೆಗೆ ಸರ್ಕಾರದ ಹಣ ಹಾಕಿದ್ದೀರಾ?” ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ನಾನು ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ಕೋವಿಡ್ ಕಾಲದ ಪರಿಹಾರದಿಂದ ಹಿಡಿದು ಅವರು ನೀಡಿದ್ದ ಭರವಸೆಗಳವರೆಗೂ ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ನಿರೀಕ್ಷಿಸಿದ್ದೆವು.ಆದರೆ ಅವರು ನಮ್ಮ ಪ್ರಶ್ನೆಗಳಿಗೆ ಉತ್ತರಿಸದೇ ಕೇವಲ ಪ್ರಮುಖ ನಾಯಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋಗಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಇದು ಡಬಲ್ ಇಂಜಿನ್ ಸರ್ಕಾರವಲ್ಲ, ಟ್ರಬಲ್ ಇಂಜಿನ್ ಸರ್ಕಾರವಾಗಿದೆ. ಸರ್ಕಾರ ಸೂಚನೆ ನೀಡಿದ್ದರೆ ವಿಮಾನ ನಿಲ್ಧಾಣದವರೇ ಪ್ರತಿಮೆ ನಿರ್ಮಾಣ ಮಾಡುತ್ತಿದ್ದರು. ಇವರಿಗೆ ಕಮೀಷನ್ ಬೇಕಿತ್ತೋ ಅಥವಾ ಬೇರೆ ಕಾರಣಕ್ಕೋ ಇವರೇ ನಿರ್ಮಾಣ ಮಾಡಿದ್ದಾರೆ” ಎಂದು ಟೀಕಿಸಿದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *