Breaking News

ರಸ್ತೆ ಗುಂಡಿಯಿಂದಾಗಿ ನಿವೃತ್ತ ಯೋಧ ಸ್ಥಳದಲ್ಲೇ ಸಾವು


ಮಂಡ್ಯ: ನಗರದ ಹೊರವಲಯದ ಕಾರಿಮನೆ ಗೇಟ್ ಬಳಿ ರಸ್ತೆ ಗುಂಡಿಯಿಂದಾಗಿ ಸಂಭವಿಸಿದ ಅಫಘಾತದಲ್ಲಿ ನಿವೃತ್ತ ಯೋಧ ಸ್ಥಳದಲ್ಲೇ ದುರಂತ ಅಂತ್ಯಕಂಡಿದ್ದಾರೆ.

ಮಂಡ್ಯ ತಾಲೂಕಿನ ಸಾತನೂರು ಗ್ರಾಮದ ಬೀರೇಶ್ವರ ಬಡಾವಣೆಯ ನರಸಯ್ಯ ಅವರ ಮಗ ಕುಮಾರ್​(34) ಮೃತರು.ಭಾರತೀಯ ಸೇನೆಯಲ್ಲಿ ನಿವೃತ್ತರಾದ ನಂತರ ಊರಿಗೆ ಆಗಮಿಸಿದ್ದ ಕುಮಾರ್​ಗೆ ಗ್ರಾಮಸ್ಥರು ಅದ್ದೂರಿ ಮೆರವಣಿಗೆ ಮಾಡಿ ಸ್ವಾಗತಿಸಿದ್ದರು. ಪೊಲೀಸ್​ ಇಲಾಖೆಗೆ ಕೆಲಸವೂ ಸಿಕ್ಕಿತ್ತು. ಬೆಂಗಳೂರಿನಲ್ಲಿ ಪೊಲೀಸ್​ ಕಾನ್​ಸ್ಟೆಬಲ್​ ತರಬೇತಿಯನ್ನೂ ಪಡೆಯುತ್ತಿದ್ದ ಕುಮಾರ್​, ರಜೆ ಮೇರೆಗೆ ಗ್ರಾಮಕ್ಕೆ ಬಂದಿದ್ದರು.

ಭಾನುವಾರ ಮಧ್ಯಾಹ್ನ ತಂದೆಯೊಂದಿಗೆ ಸಾತನೂರಿನಿಂದ ಮಂಡ್ಯಕ್ಕೆ ಬೈಕ್​ನಲ್ಲಿ ಬರುತ್ತಿದ್ದ ವೇಳೆ ಕಾರಿಮನೆ ಗೇಟ್​ ಬಳಿ ಬೈಕ್​ ಸವಾರನೊಬ್ಬ ದೊಡ್ಡ ಗುಂಡಿಗೆ ಬೀಳುವುದನ್ನು ತಪ್ಪಿಸಲು ತನ್ನ ಬೈಕನ್ನು ಎಡಕ್ಕೆ ತಿರುಗಿಸಿದ್ದಾರೆ. ಈ ವೇಳೆ ಹಿಂದೆ ಬರುತ್ತಿದ್ದ ಕುಮಾರ್​ ಅವರ ಬೈಕ್​ ಮುಂದೆ ಹೋಗುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದು, ಕುಮಾರ್​ ಕೆಳಕ್ಕೆ ಬಿದ್ದಿದ್ದಾರೆ.

ಈ ವೇಳೆ ತೆಂಗಿನಕಾಯಿ ಮಟ್ಟೆ ತುಂಬಿಕೊಂಡು ಮಂಡ್ಯ ಕಡೆಗೆ ಬರುತ್ತಿದ್ದ ಲಾರಿ, ಕುಮಾರ್​ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದರು. ಕುಮಾರ್​ ಅವರ ತಂದೆ ನರಸಯ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಚಾರ ಠಾಣೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *