ಬೆಂಗಳೂರು: ಸೇರಿದಂತೆ ರಾಜ್ಯದಲ್ಲಿ 18 ಲಕ್ಷ ಮನೆ ನೊಂದಣಿಗಾಗಿ ಅರ್ಜಿಯನ್ನು ಸಲ್ಲಿಸಲಾಗಿದೆ. ಬರುವ ವರ್ಷ ಎಲ್ಲಾ ಮನೆಗಳಿಗೆ ಹಣ ಬರಲಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಈ ಮೂಲಕ ನೂತನ ಮನೆಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಬಂದ ಮೇಲೆ 5 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿದ್ದೇವೆ. ಬೆಂಗಳೂರಿನಲ್ಲಿ 1 ಲಕ್ಷ ಮನೆ ನಿರ್ಮಾಣ ಯೋಜನೆ ಇದೆ. ಈಗಾಗಲೇ 20 ಸಾವಿರ ಮನೆಗಳ ನಿರ್ಮಾಣ ಪೂರ್ಣವಾಗಿದೆ. ಶೀಘ್ರವೇ ನೂತನ ಮನೆಗಳನ್ನು ಉದ್ಘಾಟನೆ ಮಾಡಲಾಗುತ್ತದೆ. ಅತಿಹೆಚ್ಚಿನ ಅನುದಾನ ಯಶವಂತಪುರ ಕ್ಷೇತ್ರಕ್ಕೆ ಪಡೆದಿದ್ದಾರೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

