Breaking News

ಪಂಚರತ್ನ ಯಾತ್ರೆಯಲ್ಲಿ ಜೆಡಿಎಸ್‌ನ ಮೊದಲ ಹಂತದ ಪಟ್ಟಿ ಬಿಡುಗಡೆ : ನಿಖಿಲ್ ಕುಮಾರಸ್ವಾಮಿ



ಚಿತ್ರದುರ್ಗ: ಪಂಚರತ್ನ ಯಾತ್ರೆಯಲ್ಲಿ ಜೆಡಿಎಸ್‌ನ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಅಂದೇ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಗೊಂದಲವಿರುವ ಜೆಡಿಎಸ್ ಅಭ್ಯರ್ಥಿ ಯಾರು ಎಂದು ಘೋಷಿಸುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಚಿತ್ರದುರ್ಗದಲ್ಲಿ ಹೇಳಿದರು.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಬುರಡುಕಂಟೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ತಿಂಗಳ 19ರಂದು ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಪಂಚರತ್ನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಹಿರಿಯೂರು ಟಿಕೆಟ್ ವಿಚಾರದಲ್ಲಿ ಗೊಂದಲ ಇರುವ ಬಗ್ಗೆ ಶೀಘ್ರದಲ್ಲೇ ಬಗೆಹರಿಯಲಿದೆ. ಇನ್ನು ದೇವೇಗೌಡರ ಕುಟುಂಬದಿಂದ ವ್ಯಕ್ತಿಯೊಬ್ಬರು ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ? ಎಂಬ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ನಮ್ಮ ಕುಟುಂಬದಿಂದ ಹಿರಿಯೂರು ಕ್ಷೇತ್ರದಲ್ಲಿ ಯಾರು ಸ್ಪರ್ಧಿಸುವುದಿಲ್ಲ. ಇದು ಸುಳ್ಳು ಎಂದು ಗೊಂದಲಕ್ಕೆ ತೆರೆ ಎಳೆದರು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *