Breaking News


ತೆಲುಗು ಚಿತ್ರರಂಗದ ಸೂಪರ್​ಸ್ಟಾರ್​ ನಟ ಕೃಷ್ಣ ನಿಧನ


ಹೈದರಾಬಾದ್​: ತೆಲುಗು ಚಿತ್ರರಂಗದ ಸೂಪರ್​ಸ್ಟಾರ್​ ಹಾಗೂ ಹಿರಿಯ ನಟ ಕೃಷ್ಣ  ಅವರು ಇಂದು (ನ.15) ಕೊನೆಯುಸಿರೆಳೆದಿದ್ದಾರೆ. ಕೃಷ್ಣ ಅವರು ಪ್ರಖ್ಯಾತ ನಟ ಮಹೇಶ್​ ಬಾಬು  ಅವರ ತಂದೆ. ಕೆಲವು ದಿನಗಳ ಹಿಂದಷ್ಟೇ ಸಹೋದರ ಮತ್ತು ತಾಯಿಯನ್ನು ಕಳೆದುಕೊಂಡಿದ್ದ ಮಹೇಶ್​ ಬಾಬು ಇದೀಗ ತಂದೆಯನ್ನು ಕಳೆದುಕೊಂಡಿದ್ದಾರೆ.

ಕೃಷ್ಣ ಅವರು ಉಸಿರಾಟದ ತೊಂದರೆ ಜೊತೆಗೆ ಬಹು ಅಂಗಾಂಗ ವೈಫಲ್ಯ ಅನುಭವಿಸುತ್ತಿದ್ದರು. ನಿನ್ನೆ ಸಂಜೆ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಕೃಷ್ಣ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಕೃಷ್ಣ ಅವರಿಗೆ 80 ವರ್ಷ ವಯಸ್ಸಾಗಿತ್ತು. ಸುಮಾರು 350ಕ್ಕೂ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಲವಾರು ಪ್ರಯೋಗಾತ್ಮಕ ಚಿತ್ರಗಳಿಂದ ಕೃಷ್ಣ ಅವರು ಹೆಸರುವಾಸಿಯಾಗಿದ್ದರು. ಪತ್ತೇದಾರಿ, ಐತಿಹಾಸಿಕ, ಪೌರಾಣಿಕ, ಪಾಶ್ಚಾತ್ಯ, ಆಕ್ಷನ್ ಹಾಗೂ ಕೌಬಾಯ್ ಚಲನಚಿತ್ರಗಳು ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಅಭಿನಯಿಸುವ ಮೂಲಕ ಜನಮನ್ನಣೆ ಗಳಿಸಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *