ಕಲ್ಬುರ್ಗಿ : ರಾಜ್ಯದಲ್ಲಿ ಒಂದೇ ವರ್ಷದಲ್ಲಿ 8000 ಶಾಲಾ ಕೊಠಡಿಗಳ ನಿರ್ಮಾಣ, 4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಲಬುರಗಿ ತಾಲ್ಲೂಕಿನ ಮಡಿಹಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿವೇಕ ಶಾಲಾ ಕೊಠಡಿಗಳ ಯೋಜನೆಯ ಶಂಕುಸ್ಥಪನೆ ನೆರವೇರಿಸಿ ಮಾತನಾಡಿ, ಕಲ್ಯಾಣ ಕರ್ನಾಟಕದ ಪ್ರತಿ ಕ್ಷೇತ್ರದಲ್ಲಿ 50 ಶಾಲಾಕೊಠಡಿಗಳಂತೆ ಒಟ್ಟು 2000 ಶಾಲಾ ಕೊಠಡಿಗಳನ್ನು ಇದೇ ವರ್ಷದಲ್ಲಿ ನಿರ್ಮಿಸಲಾಗುವುದು.
ಕಲ್ಯಾಣ ಕರ್ನಾಟಕ ಭಾಗದಲ್ಲಿ1060 ಕೊಠಡಿಗಳು ಮಂಜೂರಾಗಿದ್ದು, 900 ಕೊಠಡಿಗಳ ನಿರ್ಮಾಣಕ್ಕೆ ತಕ್ಷಣ ಮಂಜೂರಾತಿ ನೀಡಲಾಗುವುದು .ಒಂದೇ ವರ್ಷದಲ್ಲಿ 7600 ಶಾಲಾ ಕೊಠಡಿಗಳ ನಿರ್ಮಾಣದ ಯೋಜನೆಯನ್ನು ಯಾವುದೇ ಸರ್ಕಾರದ ಅವಧಿಯಲ್ಲಿ ಆಗರಲಿಲ್ಲ. ಶಾಲೆಗಳಿಗೆ ದೊಡ್ಡ ಪ್ರಮಾಣದ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಈ ಯೋಜನೆಗೆ ನಮ್ಮ ಸರ್ಕಾರ ಪ್ರಾರಂಭಿಸಿದೆ. 8000 ಶಾಲಾ ಕೊಠಡಿಗಳ ನಿರ್ಮಾಣದ ಗುರಿಯಿದ್ದು, ಮುಂದಿನ ಎರಡು ಮೂರು ವರ್ಷಗಳಲ್ಲಿ ಇದೇ ಯೋಜನೆಯನ್ನು ಅನುಷ್ಠಾನಗೊಳಿಸುವ ಮೂಲಕ ರಾಜ್ಯದಲ್ಲಿ ಶಾಲಾ ಕೊಠಡಿಗಳ ಕೊರತೆಯನ್ನು ನೀಗಿಸಿದಂತಾಗುತ್ತದೆ. ಈ ದೂರದೃಷ್ಟಿಯ ಯೋಜನೆಯನ್ನು ಯಾವುದೇ ಸರ್ಕಾರ ಬಂದರೂ ನಿಲ್ಲಿಸಲು ಸಾಧ್ಯವಿಲ್ಲ. ಮುಂದಿನ ಅವಧಿಯಲ್ಲಿಯೂ ಭಾಜಪ ಸರ್ಕಾರವೇ ಬರುವ ವಿಶ್ವಾಸ ನಮಗಿದೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

