ಬೆಂಗಳೂರು: ‘ಕೆಟ್ಟ ಆಲೋಚನೆಗಳನ್ನು ಬೆಳೆಯಲು ಬಿಟ್ಟರೆ ಅದು ಇಡೀ ವ್ಯವಸ್ಥೆಯನ್ನು ನಾಶ ಮಾಡಲಿದೆ ಎಂದು ಜವಾಹರಲಾಲ್ ನೆಹರೂ ಹೇಳಿದ್ದರು. ಅದರಂತೆ ಮೋದಿ ಸರ್ಕಾರ ಇಂದು ಇಡೀ ದೇಶವನ್ನೇ ನಾಶ ಮಾಡುತ್ತಿದೆ’ ಎಂದು ಕಾಂಗ್ರೆಸ್ ಮುಖಂಡ ಎಂ. ವೀರಪ್ಪ ಮೊಯಿಲಿ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ನೆಹರೂ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನೆಹರೂ ಅವರು ವೈಜ್ಞಾನಿಕವಾಗಿ ಆಲೋಚನೆ ಮಾಡಬೇಕು ಎಂದು ವಿಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಿದರು. ದೇಶದ ಬಡತನ, ಹಸಿವಿನ ಬಾಧೆ ನೀಗಿಸಲು ಇರುವ ಅಸ್ತ್ರ ವಿಜ್ಞಾನ ಎಂದು ಹೇಳಿದ್ದರು’ ಎಂದರು.
‘ಮೂಢನಂಬಿಕೆ, ಅನಕ್ಷರತೆ, ಬಡತನ ನಿರ್ಮೂಲನೆ ವಿಜ್ಞಾನದಿಂದ ಮಾತ್ರ ಸಾಧ್ಯ ಎಂಬ ಸಂದೇಶವನ್ನು ನೆಹರೂ ಕೊಟ್ಟರು. ನರೇಂದ್ರ ಮೋದಿ ಹಾಗೂ ಬಿಜೆಪಿ ದೇಶದಲ್ಲಿ ಅಂಧಕಾರ, ಜಾತಿ, ಮತೀಯ ವಾದವನ್ನು ಪಸರಿಸಿ ದೇಶ ನಾಶ ಮಾಡುತ್ತಿದ್ದಾರೆ. ಈಗ ಸಂಸ್ಕೃತಿಯ ಅರ್ಥವನ್ನೇ ಬದಲಿಸಲಾಗುತ್ತಿದೆ’ ಎಂದು ಟೀಕಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

