Breaking News

ಹೊಟ್ಟೆ ನೋವು ತಾಳಲಾರದೆ ವಿಷ ಸೇವಿಸಿ ಬಾಲಕಿ ಸಾವು

ಹುಬ್ಬಳ್ಳಿ: ಹೊಟ್ಟೆ ನೋವು ತಾಳಲಾರದೆ ಜಿಗುಪ್ಪೆಗೊಂಡ ಬಾಲಕಿಯೊಬ್ಬಳು ವಿಷಕಾರಕ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕುಸಗಲ್ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮೈಲಾರಲಿಂಗೇಶ್ವರ ದೇವಸ್ಥಾನ ರಸ್ತೆಯ ಶೈಲಾ ಗುರುಸಿದ್ದಪ್ಪ ಇಮಾಪುರ (15) ಮೃತಪಟ್ಟ ಬಾಲಕಿ. ಇವಳು ಶನಿವಾರ ರಾತ್ರಿ ಮನೆಯಲ್ಲಿ ವಿಷಕಾರಕ ಪದಾರ್ಥ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದಾಗ ಕುಟುಂಬಸ್ಥರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆಗೆ ಸ್ಪಂದಿಸದೇ ರವಿವಾರ ಮೃತಪಟ್ಟಿದ್ದಾಳೆಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *