Breaking News


ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಕೆ.ಸಿ.ವೀರೇಂದ್ರ  ಸ್ಪರ್ಧಿಸಲು ತಯಾರು


ಚಿತ್ರದುರ್ಗ: ರಾಜ್ಯ ರಾಜಕೀಯಲ್ಲಿ 2023ರ ವಿಧಾನಸಭೆ ಈಗಿನಿಂದಲೇ ಕಸರತ್ತುಗಳು ನಡೆಯುತ್ತಲೇ ಇವೆ. ಹಾಗೆಯೇ 2023ರ ಚುನಾವಣೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಕೆ.ಸಿ.ವೀರೇಂದ್ರ ಅವರು ಸ್ಪರ್ಧಿಸಲು ತಯಾರಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ವಿರೇಂದ್ರ ಪರವಾಗಿ ಅಭಿಮಾನಿಗಳು ಅರ್ಜಿ ಸಲ್ಲಿಸಿದರು.

2023ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಯುತ್ತಿದೆ. ಟಿಕೆಟ್ ಖಾತ್ರಿ ಪಡಿಸಿಕೊಳ್ಳಲು ಟಿಕೆಟ್ ಆಕಾಂಕ್ಷಿಗಳು ಆಯಾ ಪಕ್ಷದ ವರಿಷ್ಠರ ಬೆನ್ನು ಬಿದ್ದಿದ್ದಾರೆ. ಈ ಹಿಂದೆಯಷ್ಟೇ ಕ್ಯಾಸಿನೊ ದೊರೆ ಹಾಗೂ ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರ ಪಪ್ಪಿ ಅವರು ಕಾಂಗ್ರೆಸ್ ಸೇರಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದುದು ಬೆಳಕಿಗೆ ಬಂದಿತ್ತು. “ಭಾರತ್ ಜೋಡೋ” ಪಾದಯಾತ್ರೆ ವೇಳೆ ಪೂರ್ವಭಾವಿ ಸಭೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚಿತ್ರದುರ್ಗಕ್ಕೆ ಬಂದಿದ್ದರು. ಆಗ ಪಪ್ಪಿ ಅವರಿಗೆ ಟಿಕೆಟ್ ನೀಡುವಂತೆ ಅಭಿಮಾನಿಗಳು ಭಾವಚಿತ್ರ, ಫೋಟೋ ಹಿಡಿದು ಡಿ.ಕೆ.ಶಿವಕುಮಾರ್‌ ಬಳಿ ಒತ್ತಾಯಿಸಿದ್ದರು. ಆಗಿನಿಂದಲೇ ವೀರೇಂದ್ರ ಪಪ್ಪಿ ಅವರು ಕಾಂಗ್ರೆಸ್ ಪಕ್ಷ ಸೇರುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿತ್ತು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *