Breaking News

ಬೆಂಗಳೂರುನಲ್ಲಿ ಇನ್ನೂ 2 ದಿನ ಮಳೆ‌ ಸಾಧ್ಯತೆ


ಬೆಂಗಳೂರು: ನಗರದಲ್ಲಿ ನಿತ್ಯ ಸುರಿಯುತ್ತಿರುವ ಮಳೆ ಹಾಗೂ ಇನ್ನೂ ಎರಡು ದಿನ ಮುಂದುವರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ನಗರದ ಎಲ್ಲ ರಸ್ತೆಗಳ ಗುಂಡಿಗಳನ್ನು ಸಂಪೂರ್ಣ ಭರ್ತಿ ಮಾಡಲು ಪಾಲಿಕೆ ಅಧಿಕಾರಿಗಳಿಗೆ ನಿಗದಿಪಡಿಸಿದ ಗಡುವನ್ನು ನ.19ರವರೆಗೆ ವಿಸ್ತರಿಸಲಾಗಿದೆ.

ಈ ಮೊದಲು ನ.9ರವರೆಗೆ, ನಂತರ ಮಳೆಯ ಕಾರಣದಿಂದ ನ.14ರವರೆಗೆ ವಿಸ್ತರಣೆ ಮಾಡಿದ್ದ ಪಾಲಿಕೆ, ಇದೀಗ ಮತ್ತೆ ನ.19ರವರೆಗೆ ವಿಸ್ತರಣೆ ಮಾಡಿದೆ. ಈವರೆಗೆ ಬಿಬಿಎಂಪಿ ಗುರುತಿಸಿದ 33 ಸಾವಿರ ರಸ್ತೆ ಗುಂಡಿಗಳ ಪೈಕಿ 32 ಸಾವಿರಕ್ಕೂ ಅಧಿಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಬಾಕಿ 1 ಸಾವಿರ ಗುಂಡಿ ಮುಚ್ಚುವುದು ಬಾಕಿಯಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ನಿರಂತರ ಮಳೆ ಸುರಿದ ಕಾರಣ ಗುಂಡಿ ಮುಚ್ಚುವ ಕಾರ್ಯಕ್ಕೆ ಹಿನ್ನಡೆಯಾಗಿದೆ. ಹಾಗಾಗಿ ರಸ್ತೆಗುಂಡಿ ಮುಚ್ಚುವ ಗಡುವನ್ನು ವಿಸ್ತರಣೆ ಮಾಡಲಾಗಿತ್ತು. ಈಗ ಇನ್ನೂ ಎರಡು ದಿನ ಮಳೆ ಬರುವ ಮುನ್ಸೂಚನೆ ನೀಡಿದೆ. ಪೂರ್ಣ ಪ್ರಮಾಣದಲ್ಲಿ ರಸ್ತೆ ಗುಂಡಿಗಳ ಮುಕ್ತಿಗೆ ಎರಡು ದಿನ ಬಿಸಿಲ ವಾತಾವರಣ ಬೇಕಾಗುತ್ತದೆ. ಹೀಗಾಗಿ, ಪಾಲಿಕೆಯ ಅಧಿಕಾರಿಗಳಿಗೆ ನ.19ರೊಳಗೆ ರಸ್ತೆಗುಂಡಿ ಮುಚ್ಚಲು ಗಡುವು ನೀಡಲಾಗಿದೆ ಎಂದರು.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *