Breaking News

ಬಿಸಿ ಬಿಸಿ ಸಾಂಬಾರಿನಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಮಗು ಸಾವು

ಕುಂದಗೋಳ : ತಾಲೂಕಿನ ಬಿಳೇಬಾಳ ಗ್ರಾಮದ 1 ವರ್ಷ 6 ತಿಂಗಳ ಮಗು ಸ್ವಾತಿ ಚಲವಾದಿ ಕಳೆದ ನವೆಂಬರ್ 10 ರಂದು ಮನೆಯಲ್ಲಿ ಆಟವಾಡುತ್ತಿರುವ ವೇಳೆಯಲ್ಲಿ ಬಿಸಿ ಸಾಂಬಾರಿನಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಬಳಿಕ ಸ್ವಾತಿಯನ್ನು ಕುಂದಗೋಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ವಾತಿ ಚಲವಾದಿ ಮೃತಪಟ್ಟಿದ್ದಾಳೆ.

ಈ ಕುರಿತು ಕುಂದಗೋಳ ಪೊಲೀಸ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *