Breaking News

ನಾವೂ ಟಿಕೆಟ್ ಆಕಾಂಕ್ಷಿಗಳು ಎಂದು ಅರ್ಜಿ ಸಲ್ಲಿಕೆ

ಧಾರವಾಡ : ಕಾಂಗ್ರೆಸ್ ಪಕ್ಷದಲ್ಲಿ ದೀಪಕ ಚಿಂಚೋರೆ ಹಾಗೂ ಇಸ್ಮಾಯಿಲ್ ತಮಟಗಾರ ಅವರನ್ನು ಜೋಡೆತ್ತುಗಳು ಎಂದೇ ಕರೆಯಲಾಗುತ್ತಿದೆ. ಈ ಇಬ್ಬರೂ ನಾಯಕರು ತಾವೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜೋಡಿಯಾಗಿಯೇ ಅರ್ಜಿ ಸಲ್ಲಿಸಿ ಬಂದಿದ್ದಾರೆ.

2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಇಸ್ಮಾಯಿಲ್ ತಮಟಗಾರು ಉತ್ಸುಕರಾಗಿದ್ದು, ಈಗಾಗಲೇ ಅವರು ಕ್ಷೇತ್ರದಲ್ಲಿ ತಳಮಟ್ಟದಿಂದಲೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ಕ್ಷೇತ್ರದಿಂದಲೇ ಗೆದ್ದು, ಸಚಿವರಾಗಿ ಅಪಾರ ಅಭಿಮಾನಿ ಬಳಗ ಹೊಂದಿರುವ ವಿನಯ್ ಕುಲಕರ್ಣಿ ಟಿಕೆಟ್ ಬಿಟ್ಟು ಕೊಡುತ್ತಾರಾ ಎಂಬುದೇ ದೊಡ್ಡ ಪ್ರಶ್ನೆ.

ಇನ್ನು ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮೇಯರ್ ದೀಪಕ ಚಿಂಚೋರೆ ಕೂಡ ತಮ್ಮ ಅರ್ಜಿ ಸಲ್ಲಿಸಿದ್ದಾರೆ. ಈ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಕಾಂಗ್ರೆಸ್‌ನಲ್ಲಿ ದೊಡ್ಡ ದಂಡೇ ಇದೆ. ನಾಗರಾಜ ಗೌರಿ, ಪಿ.ಎಚ್.ನೀರಲಕೇರಿ, ಡಾ.ಮಯೂರ ಮೋರೆ, ಶರಣಪ್ಪ ಕೊಟಗಿ ಸೇರಿದಂತೆ ಅನೇಕರು ಈಗಾಗಲೇ ತಮ್ಮ ಅರ್ಜಿ ಸಲ್ಲಿಸಿದ್ದಾರೆ. ಈ ದಂಡು ದಾಟಿ ದೀಪಕ್ ಚಿಂಚೋರೆ ಟಿಕೆಟ್ ತರಲು ಸಜ್ಜಾಗಿದ್ದಾರೆ.

ಒಟ್ಟಾರೆ ಇಸ್ಮಾಯಿಲ್ ತಮಟಗಾರ ಹಾಗೂ ದೀಪಕ ಚಿಂಚೋರೆ ಅವರು ತಮ್ಮ ಅರ್ಜಿಯನ್ನು ಸಲ್ಲಿಸಿ ಬಂದಿದ್ದು, ಪಕ್ಷ ಯಾರಿಗೆ, ಯಾವ ಆಧಾರದ ಮೇಲೆ ಟಿಕೆಟ್ ನಿಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *