Breaking News

ಉತ್ತರ ಕರ್ನಾಟಕದ ಮಂದಿಗೆ ಸಿಹಿ ಸುದ್ದಿ



ಹುಬ್ಬಳ್ಳಿ : ಉತ್ತರ ಕರ್ನಾಟಕದ ಮಂದಿಗೆ ಹೀಗೊಂದು ಸಿಹಿ ಸುದ್ದಿ. ಅದೇನೆಂದರೆ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಒದಗಿಸಲು ಯೋಜನೆ ರೂಪಸಲಾಗುತ್ತಿದೆ. ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೆ ಮುಂದೊಂದು ದಿನ ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ರೈಲು ಅದರಲ್ಲೂ ಉತ್ತರ ಕರ್ನಾಟಕದ ಕಡೆಗೆ ಪ್ರಯಾಣಿಸಲಿದೆ.

ಕರ್ನಾಟಕದ ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಹೊಸ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಪ್ರಾರಂಭಿಸಲು ನೈಋತ್ಯ ರೈಲ್ವೆ ರೈಲ್ವೇ ಮಂಡಳಿಗೆ ಪತ್ರ ಬರೆದಿದೆ. ನೈಋತ್ಯ ವಲಯದ ಜನರಲ್ ಮ್ಯಾನೇಜರ್ ಸಂಜಯ್ ಕಿಶೋರ್ ಅವರು ಕರ್ನಾಟಕದ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರಿಗೆ ಔಪಚಾರಿಕವಾಗಿ ವಿಷಯ ತಿಳಿಸಿದ್ದಾರೆ. ಇದಕ್ಕೆ ಅನುಮೋದನೆ ಸಿಕ್ಕರೆ ಉತ್ತರ ಕರ್ನಾಟಕದ ಮಂದಿ ವಂದೇ ಭಾರತ್ ರೈಲು ಪ್ರಯಾಣವನ್ನು ಆನಂದಿಸುವ ಕಾಲ ದೂರವೇನಿಲ್ಲ.

ಚೆನ್ನೈ ಮಾರ್ಗವನ್ನು ಹೊರತುಪಡಿಸಿ ಬೆಂಗಳೂರು-ಹುಬ್ಬಳ್ಳಿ ಮತ್ತು ಬೆಂಗಳೂರು-ಕೊಯಮತ್ತೂರು ಮಾರ್ಗಗಳಲ್ಲಿ ವಂದೇ ಭಾರತ್ ರೈಲುಗಳನ್ನು ಓಡಿಸುವಂತೆ ರಾಜ್ಯಸಭಾ ಸಂಸದರು ಈ ಹಿಂದೆ ರೈಲ್ವೆ ಸಚಿವಾಲಯಕ್ಕೆ ಮನವಿ ಮಾಡಿದ್ದರು.

ಎಸ್‌ಬಿಸಿಯಿಂದ ಯುಬಿಎಲ್‌ಗೆ (ಬೆಂಗಳೂರು ನಗರದಿಂದ ಹುಬ್ಬಳ್ಳಿಗೆ) ವಂದೇ ಭಾರತ್ ಚಾಲನೆ ಮಾಡಲು ರೈಲ್ವೆ ಮಂಡಳಿಯು ವೇಳಾಪಟ್ಟಿಯನ್ನು ಕೇಳಿದೆ ಮತ್ತು ಪ್ರಸ್ತಾವನೆಯನ್ನು ಎಸ್‌ಡಬ್ಲ್ಯೂಆರ್ ರೈಲ್ವೆ ಮಂಡಳಿಗೆ ಕಳುಹಿಸಿದೆ ಎಂದು ಕಳೆದ ವಾರ ಎಸ್‌ಡಬ್ಲ್ಯೂಆರ್ ಜನರಲ್ ಮ್ಯಾನೇಜರ್ ಬಿಜೆಪಿ ಸಂಸದರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *