ಕೋಲಾರ: ಅಪಘಾತಕ್ಕೀಡಾಗಿದ್ದ ಯೋಧಯೊಬ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೆಂಗಳೂರಿನ ಯಲಹಂಕ ಕಮಾಂಡೋ ಆಸ್ಪತ್ರೆಯಲ್ಲಿ ನಡೆದಿದೆ.
22 ವರ್ಷದ ಚೇತನ್ ಎನ್ನುವವರೇ ಮೃತ ಯೋಧರಾಗಿದ್ದಾರೆ. ನ.7 ರಂದು ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಬಳಿ ಅಪಘಾತ ಸಂಭವಿಸಿತ್ತು. ಯೋಧ ಚೇಯನ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದರು. ಮೂಲತಃ ಚೇತನ್ ಅವರು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮದವರಾಗಿದ್ದು, ಇಂದು ಯಲಹಂಕ ಬಳಿಯ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತ ಚೇತನ್ ಅವರ ತಂದೆ ಸುರೇಶ್ ಅವರು ಕೂಡ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದರು. ಚೇತನ್ ಕೂಡ ತಂದೆಯ ಹಾದಿಯಲ್ಲೇ ದೇಶ ಸೇವೆ ಮಾಡಲು ಭಾರತೀಯ ಸೇನೆಗೆ ಸೇರಿದ್ದರು. ಸೇನೆಗೆ ಸೇರಿ ಮೂರು ವರ್ಷ ಪೂರೈಸಿದ್ದ ಚೇತನ್, ಇತ್ತೀಚೆಗೆ ರಜೆ ಮೇಲೆ ಕುಟುಂಬಸ್ಥರ ಜೊತೆಗೆ ಸಮಯ ಕಳೆಯಲು ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಅಪಘಾತ ಸಂಭವಿಸಿತ್ತು. ಚೇತನ್ ಅವರು ಚೆನ್ನೈ ರೆಜಿಮೆಂಟ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

