Breaking News

ರಾಜ್ಯದಲ್ಲಿ 6 ಹೊಸ ‘ಟೆಕ್‌ ಸಿಟಿ’ಗಳನ್ನು ಯೋಜನಾಬದ್ಧವಾಗಿ ನಿರ್ಮಿಸಲಾಗುವುದು : ಸಿಎಂ


ಬೆಂಗಳೂರು: ಜ್ಞಾನ ಮತ್ತು ಮಾಹಿತಿ-ತಂತ್ರಜ್ಞಾನ ಕ್ಷೇತ್ರಗಳ ಬೆಳವಣಿಗೆ ಉತ್ತೇಜಿಸಲು ರಾಜ್ಯದಲ್ಲಿ 6 ಹೊಸ ‘ಟೆಕ್‌ ಸಿಟಿ’ಗಳನ್ನು ಯೋಜನಾಬದ್ಧವಾಗಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಬೆಂಗಳೂರಿನ ಅರಮನೆಯಲ್ಲಿ ಆಯೋಜಿಸಿರುವ ಮೂರು ದಿನಗಳ ‘ಬೆಂಗಳೂರು ತಂತ್ರಜ್ಞಾನ ಶೃಂಗ’ದ ರಜತೋತ್ಸವ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ನವೀನ ತಂತ್ರಜ್ಞಾನ ಬಳಸಿಕೊಂಡು ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಮೈಸೂರು, ಬೆಂಗಳೂರಿನ ಪಕ್ಕದಲ್ಲಿ ‘ತಂತ್ರಜ್ಞಾನ ನಗರ’ಗಳನ್ನು ನಿರ್ಮಿಸಲಾಗುವುದು’ ಎಂದರು.

‘ನಗರ ನಿರ್ಮಾಣದ ಬಗ್ಗೆ ಆರು ತಿಂಗಳೊಳಗೆ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲಾಗುವುದು. ಬೆಂಗಳೂರಿನ ಪಕ್ಕ ಹೊಸ ಜ್ಞಾನ, ವಿಜ್ಞಾನ ಹಾಗೂ ಟೆಕ್‌ ಸಿಟಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ನಿರ್ಮಿಸಲಾಗುವುದು. ಸ್ಟಾರ್ಟಪ್‌ಗಳನ್ನು ಪ್ರೋತ್ಸಾಹಿಸಲು ಸ್ಟಾರ್ಟಪ್‌ ಪಾರ್ಕ್ ಅಗತ್ಯವಿದ್ದು ಇದನ್ನೂ 6 ತಿಂಗಳಲ್ಲಿ ಸ್ಥಾಪಿಸಲಾಗುವುದು’ ಎಂದು ಭರವಸೆ ನೀಡಿದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *